ಜ್ಯೋತಿಗಿರಿ
ದೇಶ
ಹುಡುಗಿಯರ ಜೊತೆಗಿನ ಸೆಕ್ಸ್ ವಿಡಿಯೋ ವೈರಲ್; ಸ್ವಯಂಘೋಷಿತ ದೇವಮಾನವ ಪರಾರಿ!
ಸ್ವಯಂಘೋಷಿತ ದೇವಮಾನವನೊಬ್ಬ ತಮ್ಮ ಸೆಕ್ಸ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಚಂಡೀಘಡ: ಸ್ವಯಂಘೋಷಿತ ದೇವಮಾನವನೊಬ್ಬ ತಮ್ಮ ಸೆಕ್ಸ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಹರಿಯಾಣದ ಗುರುಗ್ರಾಮ್ ನ ಬಹೇದಾ ಕಲಾಗ್ರಾಮದಲ್ಲಿ ಆಶ್ರಮ ನಡೆಸುತ್ತಿದ್ದ ದೇವಮಾನವ ಜ್ಯೋತಿಗಿರಿ ಅನೇಕ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಇದರ ವಿಡಿಯೋಗಳು ಇದೀಗ ವೈರಲ್ ಆಗಿದ್ದು ಸದ್ಯ ಆತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜ್ಯೋತಿಗಿರಿ ಹಲವು ಅಪ್ರಾಪ್ತ ಬಾಲಕಿಯರನ್ನು ತನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋಗಳ ಸತ್ಯಾಸತ್ಯತೆ ತಿಳಿಯಲು ಸೈಬರ್ ಸೆಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ