ಅರುಣ್ ಜೇಟ್ಲಿ ನಿಧನ: 'ದೇಶ ಮೊದಲು, ಪ್ರವಾಸ ಮೊಟಕು ಬೇಡ'; ಪ್ರಧಾನಿಗೆ ಕುಟುಂಬಸ್ಥರ ಮನವಿ!

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನದಿಂದಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವದ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ ಎಂದು ಅರುಣ್ ಜೇಟ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಪ್ರಸ್ತುತ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಅಲ್ಲಿಂದ ಬಹ್ರೇನ್ ಗೆ ಪ್ರಯಾಣ

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನದಿಂದಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವದ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ ಎಂದು ಅರುಣ್ ಜೇಟ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಜಿ 7 ಶೃಂಗಸಭೆ ನಿಮಿತ್ತ ಪ್ರಧಾನಿ ಮೋದಿ ಮೂರು ರಾಷ್ಟ್ರಗಳ ಪ್ರವಾಸಕ್ಕೆ ತೆರಳಿದ್ದು, ಪ್ರಸ್ತುತ  ಪ್ರಧಾನಿ ಮೋದಿ ಯುಎಇ ಪ್ರವಾಸದಲ್ಲಿದ್ದಾರೆ. ನಿಗದಿತ ಕಾರ್ಯಕ್ರಮದಂತೆ ಅಲ್ಲಿಂದ ಮೋದಿ ಬಹ್ರೇನ್ ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ಅರುಣ್ ಜೇಟ್ಲಿ ಅವರ ನಿಧನದ ಹಿನ್ನಲೆಯಲ್ಲಿ ಅವರು ಪ್ರವಾಸ ಮೊಟಕುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ನಡುವೆಯೇ ಜೇಟ್ಲಿ ಕುಟುಂಬಸ್ಥರು ಪ್ರಧಾನಿ ಮೋದಿ ತಮ್ಮ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ. ಅವರು ತಮ್ಮ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿ. ದೇಶ ಮೊದಲು ಎಂದು ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. 

ಇನ್ನು ಅರುಣ್ ಜೇಟ್ಲಿ ಅವರ ಅಂತಿಮ ದರ್ಶನ ಪಡೆಯಲು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ದೆಹಲಿಗೆ ದೌಡಾಯಿಸುತ್ತಿದ್ದು, ಅವರು ಚೆನ್ನೈನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ತೆರಳುತ್ತಿದ್ದರು. ವಿಚಾರ ತಿಳಿದ ಕೂಡಲೇ ದೆಹಲಿಗೆ ವಾಪಸ್ ಆಗುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com