ಜೇಟ್ಲಿ ಪತ್ನಿ ಅಥವಾ ಮಗನಿಗೆ  ರಾಜ್ಯಸಭಾ ಸದಸ್ಯತ್ವ ನೀಡಲು ಬಿಜೆಪಿ ಚಿಂತನೆ

ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ನಿಧನದಿಂದ  ತೆರವಾಗಿರುವ ರಾಜ್ಯಸಭಾ ಸದಸ್ಯತ್ವವನ್ನು ಅವರ ಪತ್ನಿ ಸಂಗೀತಾ ಜೇಟ್ಲಿ ಅಥವಾ ಅವರ ಪುತ್ರ ಅರುಣ್ ಜೇಟ್ಲಿಗೆ  ನೀಡಲು ಬಿಜೆಪಿ ಚಿಂತನೆ ನಡೆಸಿದೆ. 
ಜೇಟ್ಲಿ ಪತ್ನಿ, ಮಗ
ಜೇಟ್ಲಿ ಪತ್ನಿ, ಮಗ
Updated on

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ನಿಧನದಿಂದ  ತೆರವಾಗಿರುವ ರಾಜ್ಯಸಭಾ ಸದಸ್ಯತ್ವವನ್ನು ಅವರ ಪತ್ನಿ ಸಂಗೀತಾ ಜೇಟ್ಲಿ ಅಥವಾ ಅವರ ಪುತ್ರ ಅರುಣ್ ಜೇಟ್ಲಿಗೆ  ನೀಡಲು ಬಿಜೆಪಿ ಚಿಂತನೆ ನಡೆಸಿದೆ. 

ಪ್ರಧಾನಿ ನರೇಂದ್ರ ಮೋದಿ ನಾಳೆ ದೆಹಲಿಗೆ ವಾಪಸ್ಸಾದ ನಂತರ ಈ ಸಂಬಂಧ ಬಿಜೆಪಿ ವರಿಷ್ಠರು ಚರ್ಚೆ ನಡೆಸಲಿದ್ದು, ಈ ವಾರಾಂತ್ಯದೊಳಗೆ ಅಂತಿಮ ನಿರ್ಧಾರ  ಕೈಗೊಳ್ಳುವ ಸಾಧ್ಯತೆ ಇದೆ.

ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಗುಜರಾತಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅರುಣ್ ಜೇಟ್ಲಿ ಅವರ  ಸದಸ್ಯತ್ವ ಅವಧಿ ಮಾರ್ಚ್ 2024ಕ್ಕೆ ಅಂತ್ಯಗೊಳ್ಳಲಿದೆ.  

ಚುನಾವಣಾ ಆಯೋಗ ಮುಂದಿನ ತಿಂಗಳು ಚುನಾವಣಾ ದಿನಾಂಕವನ್ನು ನಿಗದಿಪಡಿಸುವ ಸಾಧ್ಯತೆ ಇದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com