ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ ಜಿ ಪಿ ಭದ್ರತೆ ವಾಪಸ್

ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ ಪಿಜಿ(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯ ವಾಪಸ್ ಪಡೆದಿದ್ದು ,ಇನ್ನು ಮುಂದೆ ಕಾಂಗ್ರೆಸ್ ಹಿರಿಯ ಮುಖಂಡ,
ಮನಮೋಹನ್ ಸಿಂಗ್
ಮನಮೋಹನ್ ಸಿಂಗ್

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ ಪಿಜಿ(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯ ವಾಪಸ್ ಪಡೆದಿದ್ದು ,ಇನ್ನು ಮುಂದೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಪ್ರಧಾನಿ ಸಿಂಗ್ ಗೆ ಝಡ್ ಪ್ಲಸ್ ಭದ್ರತೆ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

2004-2014ರ ವರೆಗೆ ಮನಮೋಹನ ಸಿಂಗ್  ಅವರು ಪ್ರಧಾನಮಂತ್ರಿಯಾಗಿದ್ದರು. ಸಿಂಗ್ ಅವರಿಗೆ ಇರುವ ರಕ್ಷಣಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಯಾರಿಗೆ, ಎಷ್ಟು ಭದ್ರತೆ ನೀಡಬೇಕು ಅನ್ನೋದನ್ನ ಆಯಾ ಸಂಸ್ಥೆಗಳು ವೃತ್ತಿಪರವಾಗಿ ಚರ್ಚಿಸಿ ಕೈಗೊಂಡಿರುವ ನಿರ್ಧಾರ ಇದಾಗಿದೆ. 

ಕೆಲ ದಿನಗಳ ಹಿಂದಷ್ಟೇ ಆಗಸ್ಟ್ ೨೩ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ೬ನೇ ಬಾರಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿ ಮಾಜಿ ಪ್ರಧಾನಿ ಸಿಂಗ್ ರಾಜಸ್ತಾನದಿಂದ ರಾಜ್ಯಸಭೆಗೆ ಅವಿರೋಧ ಆಯ್ಕೆಯಾಗಿದ್ದಾರೆ. ಸಿಂಗ್ ಅವರ ವಿರುದ್ಧ ರಾಜಸ್ತಾನದಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸಿರಲಿಲ್ಲ. 

ಮೇಲ್ಮನೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸದಸ್ಯತ್ವ ಅವಧಿ ಕಳೆದ ಜೂನ್ ೧೪ರಂದು ಮುಕ್ತಾಯವಾಗಿತ್ತು. ಕಳೆದ 28 ವರ್ಷಗಳಿಂದ ಅವರು ರಾಜ್ಯಸಭಾ ಸದಸ್ಯರಾಗಿ ಅಸ್ಸಾಂನಿಂದ ಆಯ್ಕೆಯಾಗುತ್ತಿದ್ದರು. 

ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಮಾತ್ರ ಎಸ್ ಜಿಪಿ ಭದ್ರತೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com