6 ತಿಂಗಳೊಳಗೆ ಅತ್ಯಾಚಾರ ಅಪರಾಧಿಗಳ ಗಲ್ಲಿಗೇರಿಸಿ: ಪ್ರಧಾನಿಗೆ ಮಹಿಳಾ ಆಯೋಗ ಪತ್ರ
ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ಸಿಕ್ಕಿಬಿದ್ದ ಅಪರಾಧಿಗಳನ್ನು ಆರು ತಿಂಗಳೊಳಗೆ ಗಲ್ಲಿಗೇರಿಸಬೇಕು ಎಂದು ಮಹಿಳಾ ಆಯೋಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದೆ.
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಳಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತಂತೆ ಪತ್ರ ಬರೆದಿದ್ದು, ಅತ್ಯಾಚಾರ ಆರೋಪಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು. ಹೀಗಾಗಿ ಅತ್ಯಾಚಾರ ಅಪರಾಧಿಗಳನ್ನು ಆರು ತಿಂಗಳಳೊಗೆ ಗಲ್ಲಿಗೇರಿಸಬೇಕು ಎಂದು ಅಗ್ರಹಿಸಿದ್ದಾರೆ.
ಅಂತೆಯೇ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಅಲ್ಲದೆ ಪೊಲೀಸರ ಸಂಖ್ಯೆಯನ್ನು ಹೆಚ್ಚಳ ಮಾಡಿ ಅವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಕಾರ್ಯ ಮಾಡಬೇಕು ಎಂದು ಸ್ವಾತಿ ಮಳಿವಾಲ್ ಆಗ್ರಹಿಸಿದ್ದಾರೆ.
ಇತ್ತೀಚೆಗೆ ಹೈದರಾಬಾದ್ ನಲ್ಲಿ ಪಶುವೈದ್ಯೆ ಪ್ರಿಯಾಂಕಾರೆಡ್ಡಿಯನ್ನು ಲಾರಿ ಚಾಲಕರು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಗೈದು ಭೀಕರವಾಗಿ ಕೊಂದು ಹಾಕಿದ್ದರು.

