ಮಧ್ಯ ಪ್ರದೇಶ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 9  ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ 

ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಪ್ರಯಾಣಿಕರು ಮೃತಪಟ್ಟು, 22 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.  
ದುರ್ಘಟನೆ ದೃಶ್ಯ
ದುರ್ಘಟನೆ ದೃಶ್ಯ
Updated on: 

ಭೋಪಾಲ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಪ್ರಯಾಣಿಕರು ಮೃತಪಟ್ಟು, 22 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. 


ಈ ದುರ್ಘಟನೆ ಭೋಪಾಲ್ ನಿಂದ 550 ಕಿಲೋ ಮೀಟರ್ ದೂರದಲ್ಲಿರುವ ಗುರ್ಹ್ ಬೈಪಾಸ್ ರಸ್ತೆಯಲ್ಲಿ ಗುರ್ಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಸಂಭವಿಸಿದೆ. ಖಾಸಗಿ ಬಸ್ಸು ಜಬಲ್ಪುರದಿಂದ ಸಿಧಿ ಜಿಲ್ಲೆಗೆ ಇಂದು ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಆಗಮಿಸುತ್ತಿದ್ದ ವೇಳೆ ಟ್ರಕ್ ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.


9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಾಯಗೊಂಡವರನ್ನು ರೇವಾ ಪಟ್ಟಣದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.


ಖಾಸಗಿ ಬಸ್ಸಿನ ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com