ಡಾ.ಬಿ.ಆರ್.ಅಂಬೇಡ್ಕರ್
ದೇಶ
ಮಹಾಪರಿನಿರ್ವಾಣ ದಿನ: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಿಸಿದ ಜನತೆ
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶ ಇಂದು ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸುತ್ತಿದೆ.
ನವದೆಹಲಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶ ಇಂದು ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸುತ್ತಿದೆ.
ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಂಬೇಡ್ಕರ್ ವಿಚಾರಧಾರೆಗಳನ್ನು ಮೆಲುಕು ಹಾಕುವ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಪ್ರಧಾನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಕೇಂದ್ರ ಸಚಿವರು, ರಾಜಕೀಯ ಪಕ್ಷಗಳ ನಾಯಕರು ಸಂವಿಧಾನ ಶಿಲ್ಪಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

