ಉನ್ನಾವೋ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಆರೋಪಿ ಸಹೋದರಿ ಒತ್ತಾಯ

ಉತ್ತರ ಪ್ರದೇಶದಲ್ಲಿನ ಉನ್ನಾವೋ ಜಿಲ್ಲೆಯಲ್ಲಿ ಗುರುವಾರ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರಮುಖ ಆರೋಪಿಯ ಸಹೋದರಿ ಒತ್ತಾಯಿಸಿದ್ದಾಳೆ
ಆಸ್ಪತ್ರೆಯಲ್ಲಿ ಸಂತ್ರಸ್ತೆ
ಆಸ್ಪತ್ರೆಯಲ್ಲಿ ಸಂತ್ರಸ್ತೆ

ಉನ್ನಾವೋ: ಉತ್ತರ ಪ್ರದೇಶದಲ್ಲಿನ ಉನ್ನಾವೋ ಜಿಲ್ಲೆಯಲ್ಲಿ ಗುರುವಾರ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರಮುಖ ಆರೋಪಿಯ ಸಹೋದರಿ ಒತ್ತಾಯಿಸಿದ್ದಾಳೆ

 ರಾಜಕೀಯ ಪಿತೂರಿಯಿಂದ ತಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆಕೆ ಹೇಳಿಕೊಂಡಿದ್ದಾಳೆ. ತಮ್ಮ ತಾಯಿ ಕುಂದಾನ್ ಪುರ ಗ್ರಾಮ ಪಂಚಾಯಿತಿ ಮುಖ್ಯಸ್ಥೆಯಾಗಿರುವುದರಿಂದ ನನ್ನ ಸಹೋದರ ಶುಭಂ ಹಾಗೂ ತಂದೆ ಹರಿ ಶಂಕರ್ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಬಿಐ ತನಿಖೆಗೆ ವಹಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಅತ್ಯಾಚಾರಕ್ಕೊಳಗದ ಸಂತ್ರಸ್ತೆ ಹೇಳಿಕೆಯ ನಂತರ ಶುಭಂ, ಹರಿ ಶಂಕರ್ ಸೇರಿದಂತೆ ಇತರ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಅತ್ಯಾಚಾರದ ಸುಳ್ಳು ಹೇಳಿ ತನ್ನ ಸಹೋದರನನ್ನು ಬಂಧಿಸಲಾಗಿದೆ. ಸಂತ್ರಸ್ತೆ ಬಗ್ಗೆ ಕರುಣೆಯಿದೆ. ಆದರೆ, ಕಾನೂನು ಹೋರಾಟ ಮುಂದುವರೆಸುವುದಾಗಿ ಅವರು ಹೇಳಿದ್ದಾರೆ. 

ರಾಯ್ ಬರೇಲಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆಸಿ ನಂತರ ಆಕೆಗೆ ಬೆಂಕಿ ಹಚ್ಚಲಾಗಿತ್ತು. ಶೇ. 90 ರಷ್ಟು ಸುಟ್ಟಗಾಯಗಳಾಗಿದ್ದ ಸಂತ್ರಸ್ತೆಯನ್ನು ಮೊದಲಿಗೆ ಲಖನೌಗೆ ನಂತರ ಏರ್ ಲಿಫ್ಟ್ ಮೂಲಕ ದೆಹಲಿಯ ಸಪ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ತನಿಖಾ ತಂಡವನ್ನು ರಾಜ್ಯಸರ್ಕಾರ ರಚಿಸಿದೆ. ಈ ಪ್ರಕರಣದ ಬಗ್ಗೆ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ ಓ. ಪಿ. ಸಿಂಗ್ ಅವರನ್ನು ಕೋರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com