ಆರೋಪಿಗಳನ್ನು ಸುಮ್ಮನೆ ಬಿಡಬೇಡಿ: ಸಹೋದರನ ಬಳಿ ಆಕ್ರೋಶ ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಆರೋಪಿಗಳನ್ನು ಸುಮ್ಮನೆ ಬಿಡಬೇಡಿ ಎಂದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಹೋದರನ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಆರೋಪಿಗಳನ್ನು ಸುಮ್ಮನೆ ಬಿಡಬೇಡಿ ಎಂದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಹೋದರನ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಮಾರ್ಚ್ ತಿಂಗಳಿನಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆಸಿದ ಐವರು ದುಷ್ಕರ್ಮಿಗಳು ಗುರುವಾರ ಮುಂಜಾನೆ ಆಕೆಯನ್ನು ಜೀವಂತವಾಗಿ ಸುಟ್ಟಿದ್ದರು. ಸಂತ್ರಸ್ತೆಯ ದೇಹ ಶೇ.90ರಷ್ಟು ಭಾಗ ಸುಟ್ಟು ಹೋಗಿದ್ದು, ಪ್ರಸ್ತುತ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿರಿಸಲಾಗಿದೆ. ಆಕೆಯ ಜೀವಕೋಶಗಳು ಕೂಡ ನಶಿಸುತ್ತಿವೆ ಎಂದು ವರದಿಗಳು ತಿಳಿಸಿವೆ. 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ತನ್ನ ಮೇಲೆ ಅಟ್ಟಹಾಸ ಮೆರೆದ ಕಾಮುಕರ ವಿರುದ್ಧ ತನ್ನ ಅಣ್ಣನ ಬಳಿ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಅವರನ್ನು ಸುಮ್ಮನೆ ಬಿಡಬಾರದು ಎಂದು ಹೇಳಿಕೊಂಡಿದ್ದಾಳೆಂದು ಮೂಲಗಳು ತಿಳಿಸಿವೆ. 

ನ್ಯಾಯಾಲಯದ ವಿಚಾರಣೆಗೆ ಎಂದು ಸಂತ್ರಸ್ತೆ ಹೋಗುತ್ತಿದ್ದ ವೇಳೆ ಪ್ರಕರಣದಲ್ಲಿ 10 ದಿನಗಳ ಹಿಂದಷ್ಟೇ ಜಾಮೀನು ಪಡೆದಿದ್ದ ಆರೋಪಿ ತನ್ನ ಸಹಚರರೊಂದಿಗೆ ಸ್ಥಳಕ್ಕೆ ಬಂದು ಆಕೆಯ ಮೇಲೆ ದಾಳಿ ನಡೆಸಿದ್ದ. ಈ ವೇಳೆ ರಕ್ಷಣೆಗಾಗಿ ಸಂತ್ರಸ್ತೆ 1 ಕಿಮೀ ಕೂಡ ಓಡಿದ್ದರೂ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಹತ್ಯೆಗೆ ಯತ್ನಿಸಿದ್ದ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com