ಉನ್ನಾವೊ ರೇಪ್ ಕೇಸಿನ ವಿಚಾರಣೆ ತ್ವರಿತಗೊಳಿಸಲಾಗುವುದು: ಸಿಎಂ ಯೋಗಿ ಆದಿತ್ಯನಾಥ್ 

ಉನ್ನಾವೊ ಗ್ಯಾಂಗ್ ರೇಪ್ ಸಂತ್ರಸ್ತೆಯ ಸಾವು ಅತ್ಯಂತ ದುಃಖಕರ ವಿಷಯವಾಗಿದ್ದು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ)
ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ)
Updated on: 

ಲಕ್ನೊ: ಉನ್ನಾವೊ ಗ್ಯಾಂಗ್ ರೇಪ್ ಸಂತ್ರಸ್ತೆಯ ಸಾವು ಅತ್ಯಂತ ದುಃಖಕರ ವಿಷಯವಾಗಿದ್ದು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.


ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಕೇಸು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಶಿಕ್ಷೆ ವಿಧಿಸಲಾಗುವುದು ಎಂದು ಸಿಎಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಐದು ಮಂದಿ ಅತ್ಯಾಚಾರ ಆರೋಪಿಗಳಿಂದ ಬೆಂಕಿಯಿಂದ ತೀವ್ರವಾಗಿ ಸುಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com