ಕರ್ನಾಟಕದ್ದಂತೆ ಮಹಾರಾಷ್ಟ್ರದಲ್ಲಿ ಆಡಲು ಕಷ್ಟಸಾಧ್ಯ: ಉದ್ಧವ್  ಸರ್ಕಾರ ಉರುಳಿಸುವ ಪ್ರಯತ್ನ ಕೈ ಬಿಟ್ಟ ಬಿಜೆಪಿ

ಕರ್ನಾಟಕದಲ್ಲಿನ ಮೈತ್ರಿ ಸರ್ಕಾರವನ್ನು ಪತನಗೊಳಿಸಿದಂತೆ  ಮಹಾರಾಷ್ಟ್ರದಲ್ಲಿನ ಆಘಾಡಿ ಸರ್ಕಾರವನ್ನು ಪತನಗೊಳಿಸುವುದು ಅಷ್ಟು ಸುಲಭವದ ಕೆಲಸವಲ್ಲಾ ಎಂಬುದನ್ನು ಬಿಜೆಪಿ ಅರಿತುಕೊಂಡಂತೆ ಕಂಡುಬಂದಿದ್ದು, ಅಂತಹ ಕೆಲಸಕ್ಕೆ ಕೈ ಹಾಕದಿರಲು ನಿರ್ಧರಿಸಿದೆ.
ಶರದ್ ಪವಾರ್, ಉದ್ಧವ್ ಠಾಕ್ರೆ
ಶರದ್ ಪವಾರ್, ಉದ್ಧವ್ ಠಾಕ್ರೆ

ನವ ದೆಹಲಿ: ಕರ್ನಾಟಕದಲ್ಲಿನ ಮೈತ್ರಿ ಸರ್ಕಾರವನ್ನು ಪತನಗೊಳಿಸಿದಂತೆ  ಮಹಾರಾಷ್ಟ್ರದಲ್ಲಿನ ಆಘಾಡಿ ಸರ್ಕಾರವನ್ನು ಪತನಗೊಳಿಸುವುದು ಅಷ್ಟು ಸುಲಭವದ ಕೆಲಸವಲ್ಲಾ ಎಂಬುದನ್ನು ಬಿಜೆಪಿ ಅರಿತುಕೊಂಡಂತೆ ಕಂಡುಬಂದಿದ್ದು, ಅಂತಹ ಕೆಲಸಕ್ಕೆ ಕೈ ಹಾಕದಿರಲು ನಿರ್ಧರಿಸಿದೆ.

 ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಪಟ್ಟಭದ್ರ ಹಿತಾಸಕ್ತಿಗನುಗುಣಾಗಿ ಉದ್ಧವ್ ಸರ್ಕಾರ ಸ್ಥಿರವಾಗಿರುತ್ತದೆ. ಸೈದ್ಧಾಂತಿಕ ವಿರೋಧಾಭಾಸಗಳು ಆಡಳಿತರೂಢ ಮೈತ್ರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದಂತೆ ಕಂಡುಬರುತ್ತಿಲ್ಲ. 

“ಮಹಾರಾಷ್ಟ್ರದಲ್ಲಿ ಸೈದ್ಧಾಂತಿಕ ವಿರೋಧಾಭಾಸಗಳು ಈಗ ಹೆಚ್ಚು ವಿಷಯವಲ್ಲ. ಧೀರ್ಘ ವರ್ಷಗಳ ಬಳಿಕ ಕಾಂಗ್ರೆಸ್ ಹಾಗೂ ಎನ್ ಸಿಪಿ ಅಧಿಕಾರಕ್ಕೆ ಬಂದಿವೆ. ಎರಡು ಪಕ್ಷಗಳೂ ಅಧಿಕಾರದ ಲಾಭಕ್ಕಾಗಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿವೆ. ಕರ್ನಾಟಕದಲ್ಲಿ ಆದ್ದಂತೆ ಮಹಾರಾಷ್ಟ್ರದ ರಾಜಕೀಯದಲ್ಲಿ ಬದಲಾವಣೆಯನ್ನು ನಿರೀಕ್ಷಿಸಲು ಆಗಲ್ಲ ಎಂದು ಬಿಜೆಪಿಯ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ಕರ್ನಾಟಕದಲ್ಲಿ ಆದ್ದಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯ ಹಾದಿ ದುರ್ಗಮವಾಗಿದೆ. ಆದ್ದರಿಂದ ಪಕ್ಷದ ಸಂಘಟನೆ ಕಡೆಗೆ ಹೆಚ್ಚಿನ ಗಮನ ನೀಡಲಾಗುತ್ತಿದ್ದೆ ಎಂದು ಮತ್ತೊಬ್ಬ ಕಾರ್ಯಕರ್ತರು ಹೇಳುತ್ತಾರೆ.

2024ರ ಲೋಕಸಭಾ ಚುನಾವಣೆಯತ್ತ ಗಮನ ಹರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಹಾರಾಷ್ಟ್ರದ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ಶಿವಸೇನಾ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಸಂಘಟಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com