ಜಾರ್ಖಂಡ್ ವಿಧಾನಸಭೆ ಚುನಾವಣೆ: 3ನೇ ಹಂತದ ಮತದಾನ ಆರಂಭ

ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಗುರುವಾರ ಮೂರನೇ ಹಂತದ ಮತದಾನ ಆರಂಭವಾಗಿದ್ದು, ಜಾರ್ಖಂಡ್ ನ ಒಟ್ಟು 17 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
3ನೇ ಹಂತದ ಮತದಾನ ಆರಂಭ
3ನೇ ಹಂತದ ಮತದಾನ ಆರಂಭ

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಗುರುವಾರ ಮೂರನೇ ಹಂತದ ಮತದಾನ ಆರಂಭವಾಗಿದ್ದು, ಜಾರ್ಖಂಡ್ ನ ಒಟ್ಟು 17 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಮೂರನೇ ಹಂತದಲ್ಲಿ ಜಾರ್ಖಂಡ್ ನ ಕೋಡರ್ಮಾ, ಬರ್ಕಾಥಾ, ಬಾರ್ಹಿ, ಬಾರ್ಕಗಾಂವ್, ರಾಮ್‌ಘಡ್, ಮಾಂಡು, ಹಜಾರಿಬಾಗ್, ಸಿಮರಿಯಾ (ಎಸ್‌ಸಿ), ಧನ್ವಾರ್, ಗೋಮಿಯಾ, ಬೆರ್ಮೊ, ಇಚಗ h, ಸಿಲ್ಲಿ, ಖಿಜ್ರಿ, ರಾಂಚಿ, ಹತಿಯಾ ಮತ್ತು ಕಾಂಕೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 

ರಾಜಧಾನಿ ರಾಂಚಿ, ಹತಿಯಾ, ಕಾಂಕೆ, ಬರ್ಕಾಥಾ ಮತ್ತು ರಾಮಘಡ್ ನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಉಳಿದ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 3 ಗಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದೆ.

ಇನ್ನು ಬಿಜೆಪಿಗೆ ಸೆಡ್ಡು ಹೊಡೆಯಲು ಜಾರ್ಖಂಡ್ ಮುಕ್ತಿ ಮೋರ್ಚಾ( ಜೆಎಂಎಂ), ಕಾಂಗ್ರೆಸ್, ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ ರಚಿಸಿದ್ದು, ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ. 81 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 31, ಆರ್ ಜೆಡಿ 7 ಹಾಗೂ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ.

ಡಿಸೆಂಬರ್ 07ರಂದು 20 ಕ್ಷೇತ್ರಗಳಲ್ಲಿ ಎರಡನೇ ಹಂತ ಮುಕ್ತಾಯದ ಬಳಿಕ ಡಿಸೆಂಬರ್ 12ರಂದು ಮೂರನೇ ಹಂತದಲ್ಲಿ 17 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಜಾರ್ಖಂಡ್ ನಲ್ಲಿ ಒಟ್ಟು ಐದು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 30ರಿಂದ ಡಿಸೆಂಬರ್ 20 ರ ತನಕ ಮತದಾನ ನಿಗದಿಯಾಗಿದೆ. ಡಿಸೆಂಬರ್ 23ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com