ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಗೃಹ ಸಚಿವ ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಲ್ಲಾಂಗ್ ಭೇಟಿಯನ್ನು ರದ್ದುಗೊಳಿಸಿದ್ದಾರೆ. 
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಗೃಹ ಸಚಿವ ಅಮಿತ್ ಶಾ
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಗೃಹ ಸಚಿವ ಅಮಿತ್ ಶಾ
Updated on: 

ಶಿಲ್ಲಾಂಗ್: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಲ್ಲಾಂಗ್ ಭೇಟಿಯನ್ನು ರದ್ದುಗೊಳಿಸಿದ್ದಾರೆ. 

ಈಶಾನ್ಯ ಪೊಲೀಸ್ ಅಕಾಡೆಮಿಗೆ ಡಿ.15 ರಂದು ಅಮಿತ್ ಶಾ ಭೇಟಿ ನಿಗದಿಯಾಗಿತ್ತು. ಆದರೆ ಈಶಾನ್ಯ ರಾಜ್ಯಗಳಲ್ಲಿ ಸಿಎಬಿ ವಿರುದ್ಧ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. 

ತರಬೇತಿ ಪಡೆದ ಪೊಲೀಸ್ ಸಿಬ್ಬಂದಿಗಳ ಪರೇಡ್ ಕಾರ್ಯಕ್ರಮದಲ್ಲಿ ಅಮಿತ್ ಶಾ ಎನ್ ಇಪಿಎ ಗೆ ಭೇಟಿ ನೀಡಬೇಕಿತ್ತು.  ಇದಕ್ಕೂ ಮುನ್ನ ತ್ರಿಪುರಾದ ಬುಡಕಟ್ಟು ಮೂಲದ ಪಕ್ಷಗಳ ನಾಯಕರನ್ನು ಅಮಿತ್ ಶಾ ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com