ಜಾಮಿಯಾ ಹಿಂಸಾಚಾರ: ಡಿಸಿಎಂ ಸಿಸೋಡಿಯಾ,ಆಪ್ ಶಾಸಕ ಖಾನ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ  ತಿರುಗುವಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಎಎಪಿ ಶಾಸಕ ಖಾನ್ ಕೈವಾಡವಿದೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಘಟಕ  ದೂರು ದಾಖಲಿಸಿದೆ.
ಡಿಸಿಎಂ ಮನೀಶ್ ಸಿಸೋಡಿಯಾ
ಡಿಸಿಎಂ ಮನೀಶ್ ಸಿಸೋಡಿಯಾ

ನವ ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ  ತಿರುಗುವಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಎಎಪಿ ಶಾಸಕ ಖಾನ್ ಕೈವಾಡವಿದೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಘಟಕ  ದೂರು ದಾಖಲಿಸಿದೆ.

ಸಿಸೋಡಿಯಾ, ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಇತರ ಪಕ್ಷದ ಮುಖಂಡರು ಹಿಂಸಾಚಾರವನ್ನು ಪ್ರಚೋದಿಸಿದ್ದು, ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.   

ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ಕು ಸಾರ್ವಜನಿಕ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, 100 ಖಾಸಗಿ ವಾಹನಗಳಿಗೆ ಹಾನಿಯಾಗಿದೆ. ಜಾಮಿಯಾ ವಿದ್ಯಾರ್ಥಿಗಳು, ಪೊಲೀಸರು ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರ ಬಳಿ ದೂರು ದಾಖಲಿಸಿದ್ದು, ನಿಗದಿತ ವೇಳೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. 

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಿವಾರಿ, ಪೊಲೀಸರಿಗೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಸಿಸೋಡಿಯಾ ಟ್ವೀಟರ್ ನಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಮಧ್ಯೆ ಬಿಜೆಪಿ ಹಿಂಸಾಚಾರದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ದೆಹಲಿ ಘಟಕದ ಸಂಚಾಲಕ ಗೋಪಾಲ್ ರಾಯ್ ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com