ಜಾಮಿಯಾ ಹಿಂಸಾಚಾರ: 10 ಕ್ರಿಮಿನಲ್ ಗಳ ಬಂಧನ, ಯಾರೂ ವಿದ್ಯಾರ್ಥಿಗಳೇ ಅಲ್ಲ!

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವಣದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಹಿನ್ನೆಲೆಯುಳ್ಳ 10 ಮಂದಿಯನ್ನು ಬಂಧಿಸಲಾಗಿದೆ.
ವಿದ್ಯಾರ್ಥಿಗಳ ಪ್ರತಿಭಟನೆ
ವಿದ್ಯಾರ್ಥಿಗಳ ಪ್ರತಿಭಟನೆ

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವಣದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಹಿನ್ನೆಲೆಯುಳ್ಳ 10 ಮಂದಿಯನ್ನು ಬಂಧಿಸಲಾಗಿದೆ.

ವಿಶ್ವವಿದ್ಯಾಲಯದ ಯಾವುದೇ  ವಿದ್ಯಾರ್ಥಿಯನ್ನು ಬಂಧಿಸಿಲ್ಲ, ಅವರಿಗೆ ಕ್ಲೀನ್ ಚೀಟಿ ಕೂಡಾ ನೀಡಿಲ್ಲ. ಬಂಧಿತರು ವಿಶ್ವವಿದ್ಯಾಲಯದ ಅಜು ಬಾಜಿನ  ಜಾಮಿಯಾ ಹಾಗೂ ಒಕ್ಲಾ ಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ. 

ವಿವಾದಾತ್ಮಕ ನೂತನ ಪೌರತ್ವ ( ತಿದ್ದುಪಡಿ) ಕಾಯ್ದೆ ವಿರೋಧಿಸಿ ಭಾನುವಾರ ಸಂಜೆ  ಜಾಮಿಯಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿ 3 ಸರ್ಕಾರಿ ಬಸ್ ಗಳು, ಟ್ರಕ್ ವೊಂದಕ್ಕೆ ಬೆಂಕಿ ಹಚ್ಚಲಾಗಿತ್ತು. 

ಅನುಮತಿ ಪಡೆಯದೆ ವಿಶ್ವವಿದ್ಯಾಲಯ ಆವರಣ ಪ್ರವೇಶಿಸಿದ ಪೊಲೀಸರು 100 ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ನಂತರ ಜಾಮಿಯಾ, ದೆಹಲಿ ವಿಶ್ವವಿದ್ಯಾಲಯ ಹಾಗೂ ಜೆಎನ್ ಯು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ದೆಹಲಿ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ನಂತರ ಸೋಮವಾರ ಮಧ್ಯಾಹ್ನ ಬಂಧಿಸಲಾಗಿದ್ದ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿತ್ತು.   

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಕೆಲವರ ಪಿತೂರಿಯಿಂದಾಗಿ ಹಿಂಸಾಚಾರಕ್ಕೆ ತಿರುಗಿದ್ದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕೆಲ ಸ್ಥಳೀಯರೇ ಕಾರಣ ಎಂದು ಕೆಲ ಸಾರ್ವಜನಿಕ ಗುಂಪು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಿ ಜಾಮಿಯಾ ಉಪ ಕುಲಪತಿ ನಜ್ಮಾ ಅಖ್ತಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com