
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮೊರೆ ಹೋದವರಿಗೆ ನ್ಯಾಯಾಲಯ ಛೀಮಾರಿ ಹಾಕಿದೆ. ಮೊದಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ, ಅಲ್ಲಿ ನ್ಯಾಯ ಸಿಗದಿದ್ದರೆ ಸುಪ್ರೀಂ ಕೋರ್ಟ್ ಗೆ ಬನ್ನಿ ಎಂದು ಹೇಳಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಬಸ್ಸುಗಳಿಗೆ ಹೇಗೆ ಬೆಂಕಿ ಹಚ್ಚಲಾಯಿತು, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರು ಯಾರು ಎಂದು ಸಹ ಅರ್ಜಿದಾರರನ್ನು ಕೇಳಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರ ನ್ಯಾಯವಾದಿಗಳಿಗೆ, ನಮ್ಮ ಸಮಯ ಹಾಳು ಮಾಡಲು ಬರಬೇಡಿ, ಇಂತಹ ಸಮಸ್ಯೆಗಳಿಗೆ ಮೊದಲು ಕೆಳ ಹಂತದ ನ್ಯಾಯಾಲಯಗಳಿಗೆ ಹೋಗಬೇಕು, ನಂತರ ಇಲ್ಲಿಗೆ ಬರಬೇಕು ಎಂದು ಹೇಳಿತು.
Advertisement