ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗೆ ಪಿಎಫ್ಐ, ಸಿಮಿ ಕಾರಣ- ಬಿಜೆಪಿ ಆರೋಪ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು,ಇದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಒಯಾ (ಸಿಮಿ) ಕಾರಣ ಎಂದು ಬಿಜೆಪಿ ಆರೋಪ ಮಾಡಿದೆ. 
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗೆ ಪಿಎಫ್ಐ, ಸಿಮಿ ಕಾರಣ- ಬಿಜೆಪಿ ಆರೋಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗೆ ಪಿಎಫ್ಐ, ಸಿಮಿ ಕಾರಣ- ಬಿಜೆಪಿ ಆರೋಪ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ cದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು,ಇದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಒಯಾ (ಸಿಮಿ) ಕಾರಣ ಎಂದು ಬಿಜೆಪಿ ಆರೋಪ ಮಾಡಿದೆ. 

ನಿಷೇಧಿತ ಉಗ್ರ ಸಂಘಟನೆಗಳಾದ ಪಿಎಫ್ಐ ಹಾಗೂ ಸಿಮಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆಯ ಹಿಂದಿರುವ ಸಂಘಟನೆಗಳಾಗಿವೆ ಎಂದು ಬಿಜೆಪಿ ಐಟಿ ಸೆಲ್ ನ ಮುಖ್ಯಸ್ಥ ಅಮಿತ್ ಮಾಲ್ವಿಯಾ ಟ್ವೀಟ್ ಮಾಡಿದ್ದಾರೆ. 

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯ ವಿವಿಯ ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು 10 ಜನರನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಬಿಜೆಪಿ ಪಿಎಫ್ಐ, ಸಿಮಿ ಸಂಘಟನೆಗಳ ಮೇಲೆ ಆರೋಪ ಹೊರಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com