ಜಾಮಿಯಾ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ 

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಕಳೆದ ಭಾನುವಾರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದ ವೇಳೆ ಪೊಲೀಸರು ಗುಂಡು ಹಾರಿಸಿರಲಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.
ಜಾಮಿಯಾ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಕಳೆದ ಭಾನುವಾರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದ ವೇಳೆ ಪೊಲೀಸರು ಗುಂಡು ಹಾರಿಸಿರಲಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ. ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.


ಘಟನೆಗೆ ಸಂಬಂಧಿಸಿದಂತೆ ಅಪರಾಧ ಹಿನ್ನಲೆಯುಳ್ಳ 10 ಮಂದಿಯನ್ನು ಬಂಧಿಸಲಾಗಿದ್ದು ಇನ್ನೂ ಹೆಚ್ಚು ಸಮಾಜ ವಿರೋಧಿ ಜನರನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದರು.


ಜಾಮಿಯಾ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಗುಂಡು ದಾಳಿ ಮಾಡಿರಲಿಲ್ಲ, ಘಟನೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 10 ಮಂದಿ ಕ್ರಿಮಿನಲ್ ಹಿನ್ನಲೆಯುಳ್ಳವರು. ಇನ್ನಷ್ಟು ಸಮಾಜ ವಿರೋಧಿ ಜನರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com