ಕೇಂದ್ರಸರ್ಕಾರಕ್ಕೆ ಧೈರ್ಯವಿದ್ದರೆ ವಿಶ್ವಸಂಸ್ಥೆ ಮೇಲ್ವಿಚಾರಣೆಯಲ್ಲಿ ಜನಾಭಿಪ್ರಾಯ ಸಂಗ್ರಹಿಸಲಿ-ಮಮತಾ 

ದೇಶದ ವಿವಿಧೆಡೆ  ಆಕ್ರೋಶ ಹಾಗೂ ಪ್ರತಿಭಟನೆಗೆ ಗುರಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ದೇಶಾದ್ಯಂತ ವಿಸ್ತರಣೆ ಬಗ್ಗೆ ಕೇಂದ್ರಸರ್ಕಾರಕ್ಕೆ ಧೈರ್ಯವಿದ್ದರೆ  ವಿಶ್ವಸಂಸ್ಥೆ ಮೇಲ್ವಿಚಾರಣೆಯಲ್ಲಿ ಜನಭಿಪ್ರಾಯವನ್ನು ಸಂಗ್ರಹಿಸಲಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ದೇಶದ ವಿವಿಧೆಡೆ  ಆಕ್ರೋಶ ಹಾಗೂ ಪ್ರತಿಭಟನೆಗೆ ಗುರಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ದೇಶಾದ್ಯಂತ ವಿಸ್ತರಣೆ ಬಗ್ಗೆ ಕೇಂದ್ರಸರ್ಕಾರಕ್ಕೆ ಧೈರ್ಯವಿದ್ದರೆ ವಿಶ್ವಸಂಸ್ಥೆ ಮೇಲ್ವಿಚಾರಣೆಯಲ್ಲಿ ಜನಾಭಿಪ್ರಾಯವನ್ನು ಸಂಗ್ರಹಿಸಲಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.

 ಪ್ರತಿಭಟನಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ  ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂದೂಗಳು ಹಾಗೂ ಮುಸ್ಲಿಂ ನಡುವಣ ಹೋರಾಟದಂತೆ ಬ್ರಾಂಡ್ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

ಬಹುಮತ ಪಡೆಯುವ ಸಲುವಾಗಿ ಬಿಜೆಪಿ ಏನು ಬೇಕಾದರೂ ಮಾಡುತ್ತದೆ. ಬಿಜೆಪಿಗೆ ಧೈರ್ಯವಿದ್ದರೆ ಪೌರತ್ವ ತಿದ್ದುಪಡಿ ಹಾಗೂ ಏನ್ ಆರ್ ಸಿ ಬಗ್ಗೆ ವಿಶ್ವಸಂಸ್ಥೆ ಮೇಲ್ವಿಚಾರಣೆಯಲ್ಲಿ ಜನಾಭಿಪ್ರಾಯ ಸಂಗ್ರಹಿಸಲಿ. ವಿಶ್ವಸಂಸ್ಥೆ ಅಥವಾ ಮಾನವ ಹಕ್ಕುಗಳ ಆಯೋಗದಂತಹ ಪ್ರಾಮಾಣಿಕ ಸಂಸ್ಥೆಗಳಿಂದ ಈ ಕಾರ್ಯ ಮಾಡಲಿ ಎಂದು ಸವಾಲು ಹಾಕಿದರು.

ಒಂದು ವೇಳೆ ಈ ಜನಾಭಿಪ್ರಾಯ ಸಂಗ್ರಹದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದರೆ ಸರ್ಕಾರದಿಂದ ಕೆಳಗಿಳಯಬೇಕು ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ಸೋಮವಾರದಿಂದ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಮೂರು ಪ್ರತಿಭಟನಾ ಮೆರವಣಿಗೆಗಳು ನಡೆದಿದ್ದು, ನಾಳೆ ಕೂಡಾ ಅಲ್ಪಸಂಖ್ಯಾತ ಪ್ರಾಬಲ್ಯದ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಮತ್ತೊಂದು ರಾಲಿ ನಡೆಸಲಿದ್ದಾರೆ.  ಕೇಂದ್ರ ಸರ್ಕಾರ ಈ ವಿವಾದಾತ್ಮಕ ಕಾಯ್ದೆ ಹಿಂಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com