ಪಂಜಾಬ್: ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ, ಮತ್ತೊಬ್ಬರಿಗೆ ಗಾಯ 

ಪಂಜಾಬ್ ರಾಜ್ಯದ ಮೊಗಾ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಚಂಡೀಗಢ: ಪಂಜಾಬ್ ರಾಜ್ಯದ ಮೊಗಾ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. 

ವೆಬ್ ಚಾನೆಲ್ ಜರ್ನಲಿಸ್ಟ್  ಜೊಬಾನ್ ಪ್ರೀತ್ ಸಿಂಗ್  ಮೃತಪಟ್ಟಿದ್ದು, ಸ್ಥಳೀಯ ದೈನಂದಿನ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗುರ್ಚೆಟ್ ಸಿಂಗ್ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಇವರಿಬ್ಬರೂ ಸ್ವಿಪ್ಟ್ ಕಾರಿನಲ್ಲಿ ಚಂಡೀಗಢಕ್ಕೆ ತೆರಳುತ್ತಿರುವಾಗ ಮೊಗಾ ಹೊರವಲಯದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಗುಂಡೇಟು ತಿಂದರೂ ಗುರ್ಚೆಟ್ ಸುಮಾರು 20 ಕಿಲೋ ಮೀಟರ್ ದೂರದವರೆಗೂ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಆದರೆ, ಆಸ್ಪತ್ರೆ ಬಳಿ ಬರುವಷ್ಟರಲ್ಲಿ ಜೊಬಾನ್ ಪ್ರೀತ್ ಸಿಂಗ್ ಮೃತಪಟ್ಟಿದ್ದಾನೆ. ಗುರ್ಚೆಟ್ ಅವರನ್ನು ಲೂದಿಯಾನದ ದಯಾನಂದ ವೈದ್ಯಕೀಯ ಕಾಲೇಜಿಗೆ ಸೇರಿಸಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ. ಆದರೆ, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜೊಬಾನ್ ಪ್ರೀತ್ ಸಿಂಗ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೊಗಾ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸ್ ತನಿಖೆ ಪ್ರಗತಿಯಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com