ಪೌರತ್ವ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ, ಸಾವಿನ ಸಂಖ್ಯೆ 15ಕ್ಕೇರಿಕೆ

ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ. 
ಉತ್ತರ ಪ್ರದೇಶದಲ್ಲಿ ಹಿಂಸಾಚಾರ
ಉತ್ತರ ಪ್ರದೇಶದಲ್ಲಿ ಹಿಂಸಾಚಾರ
Updated on: 

ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ. 

ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಹಿಮ್ಮೆಟ್ಟಿಸುತ್ತಿರುವ ವೇಳೆ ವಾರಣಾಸಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ 8 ಬಾಲಕನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇನ್ನು ಮೀರುತ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. 

ಶುಕ್ರವಾರ ಪ್ರಾರ್ಥನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಈ ವೇಳೆ ಹಲವು ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. 

ಇನ್ನು ಕೆಲವೆಡೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿದ್ದಾರೆ. ಘರ್ಷಣೆ ವೇಳೆ 6 ಮಂದಿ ಪೊಲೀಸರಿಗೂ ಗುಂಡಿನ ಗಾಯಗಳಾಗಿದ್ದು, ಈ ಪೈಕಿ ಓರ್ವ ಪೊಲೀಸ್ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಬಿಜ್ನೋರ್, ಸಂಭಾಲ್, ಫಿರೋಜಾಬಾದ್, ಕಾನ್ಪುರ, ವಾರಣಾಸಿ ಹಾಗೂ ಮೀರುತ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com