ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ರಾಜ್ ಘಾಟ್ ನಲ್ಲಿ ಕೈ ನಾಯಕರ ಮೌನ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂವಿಧಾನ ರಕ್ಷಣೆ ಹಾಗೂ ಜನರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ  ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸೋಮವಾರ ಮಧ್ಯಾಹ್ನ ಮಹಾತ್ಮ ಗಾಂಧೀಜಿ ಸಮಾಧಿ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸೋನಿಯಾ, ರಾಹುಲ್ ಗಾಂಧಿ
ಸೋನಿಯಾ, ರಾಹುಲ್ ಗಾಂಧಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂವಿಧಾನ ರಕ್ಷಣೆ ಹಾಗೂ ಜನರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ  ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸೋಮವಾರ ಮಧ್ಯಾಹ್ನ ಮಹಾತ್ಮ ಗಾಂಧೀಜಿ ಸಮಾಧಿ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಂಜೆಯವರೆಗೂ ನಡೆಯಲಿರುವ ಸತ್ಯಾಗ್ರಹ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೋನಿಯಾ ಗಾಂಧಿ ನಿವಾಸದಲ್ಲಿ ಶನಿವಾರ ಸಂಜೆ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ಮೌನ ಪ್ರತಿಭಟನೆಯ ನಿರ್ಧಾರ ಕೈಗೊಳ್ಳಲಾಗಿದೆ. 

ರಾಜ್ ಘಾಟ್ ನಲ್ಲಿ ನಾಳೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ಅದಕ್ಕೆ ಸಂಬಂಧಿತ ಆಡಳಿತ ಸಂಸ್ಥೆಗಳಿಂದ ಅನುಮತಿ ಇನ್ನೂ ಪಡೆಯದ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com