ಪೌರತ್ವ ಕಿಚ್ಚು: ಉತ್ತರ ಪ್ರದೇಶದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆ, ಬಿಹಾರ ಬಂದ್ ವೇಳೆ ವಿಧ್ವಂಸಕ ಕೃತ್ಯ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಉತ್ತರ ಪ್ರದೇಶದಲ್ಲಿ ಮೃತಪಟ್ಟರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ.  ಈ ಮಧ್ಯೆ ಬಿಹಾರದಲ್ಲಿ ಆರ್ ಜೆಡಿ ಕರೆ ನೀಡಿದ್ದ ಬಂದ್ ವೇಳೆಯಲ್ಲಿ ಅಪಾರ ಪ್ರಮಾಣದಲ್ಲಿ ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿದೆ.
ಬೃಹತ್ ಪ್ರತಿಭಟನೆಯ ಚಿತ್ರ
ಬೃಹತ್ ಪ್ರತಿಭಟನೆಯ ಚಿತ್ರ
Updated on: 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಉತ್ತರ ಪ್ರದೇಶದಲ್ಲಿ ಮೃತಪಟ್ಟರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ.  ಈ ಮಧ್ಯೆ ಬಿಹಾರದಲ್ಲಿ ಆರ್ ಜೆಡಿ ಕರೆ ನೀಡಿದ್ದ ಬಂದ್ ವೇಳೆಯಲ್ಲಿ ಅಪಾರ ಪ್ರಮಾಣದಲ್ಲಿ ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿದೆ.

ಉತ್ತರ ಪ್ರದೇಶದಲ್ಲಿ 260 ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದರೆ, ಈ ಪೈಕಿ 57 ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ. 

ಕಾನ್ಪುರದಲ್ಲಿ ಪ್ರತಿಭಟನಾಕಾರರು  ಯತಿಮ್ಖಾನಾ ಪೊಲೀಸ್ ಠಾಣೆಗೆ ಇಟ್ಟಿಗೆಯಿಂದ ಹೊಡೆದು ಬೆಂಕಿ ಹಚ್ಚಿದ್ದರಿಂದ  ಪೊಲೀಸರು ಸೇರಿದಂತೆ ಅನೇಕ ಜನರಿಗೆ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ. 

ರಾಮ್ ಪುರದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರು ನಡುವೆ ನಡೆದ ಘರ್ಷಣೆ ವೇಳೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಪೊಲೀಸರು ಸೇರಿದಂತೆ ಅನೇಕ ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರ ವೇಳೆಯಲ್ಲಿ ಐದು ದ್ವಿಚಕ್ರ ವಾಹನ ಹಾಗೂ ಕಾರೊಂದಕ್ಕೆ ಬೆಂಕಿ ಹಚ್ಚಲಾಗಿದೆ. ಲಾಠಿ ಚಾರ್ಜ್ ವೇಳೆಯಲ್ಲಿ ಐವರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ದೆಹಲಿ

ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ 15 ಮಂದಿಯನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅಸ್ಸಾಂ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ಪ್ರತಿಭಟನಾ ಮೆರವಣಿಗೆಗಳು ನಡೆದವು. ಪಶ್ಚಿಮ ಬಂಗಾಳ ಶಾಂತಿಯುತವಾಗಿತ್ತು. ಮೇಘಾಲಾಯದಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ಪುನರ್ ಸ್ಥಾಪಿಸಲಾಗಿತ್ತು. 

ಬಿಹಾರ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಜೆಡಿ ಕರೆ ನೀಡಿದ್ದ ಬಂದ್ ಆಚರಣೆ ವೇಳೆಯಲ್ಲಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಭಾರೀ ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿದೆ. ದಿನವಿಡೀ ನಡೆದ ಬಂದ್ ನಿಂದಾಗಿ ಬಸ್ , ರೈಲು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. 

ಚೆನ್ನೈ ರೈಲು ನಿಲ್ದಾಣದಲ್ಲಿ ರೈಲುಗಳನ್ನು ತಡೆಯಲು ಸಿಪಿಐ ( ಎಂ) ಪ್ರತಿಭಟನಾಕಾರರು ಪ್ರಯತ್ನಿಸಿದರು. ಕಾಂಗ್ರೆಸ್ ನೇತೃತ್ವದಲ್ಲಿ ಕೇರಳದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.  ನೂತನ ಕಾಯ್ದೆಯನ್ನು ಮುಸ್ಲಿಂರನ್ನು ಸೇರಿಸಬೇಕೆಂದು  ಬಿಜೆಪಿ ಮೈತ್ರಿ ಶಿರೋಮಣಿ ಅಕಾಲಿದಳ ಕೇಂದ್ರಸರ್ಕಾರವನ್ನು ಒತ್ತಾಯಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com