ಹರ್ಷವರ್ಧನ್ ಶ್ರಿಂಗ್ಲಾ
ದೇಶ
ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ ಶ್ರಿಂಗ್ಲಾ ನೇಮಕ
ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ಅಮೆರಿಕದ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ನವದೆಹಲಿ: ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ಅಮೆರಿಕದ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ಶ್ರಿಂಗ್ಲಾ ಅವರು ಭಾರತೀಯ ವಿದೇಶಾಂಗ ಸೇವೆಯ 1984 ಬ್ಯಾಚ್ ಅಧಿಕಾರಿ. ವಿದೇಶಾಂಗ ಕಾರ್ಯದರ್ಶಿಯ ಉಸ್ತುವಾರಿಯನ್ನು ಜನವರಿ 29 ರಂದು ಹಾಲಿ ಕಾರ್ಯದರ್ಶಿ ವಿಜಯ್ ಗೋಖಲೆ ಅವರಿಂದ ವಹಿಸಿಕೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ನೇಮಕಾತಿ ಸಮಿತಿ ಈ ನೇಮಕಾತಿ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ