ಎನ್ ಪಿಆರ್ ಅಡಿಯಲ್ಲಿ ಸೋನಿಯಾ ಗಾಂಧಿ ಜನಗಣತಿ: ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2011 ರಲ್ಲಿ ಜನಸಂಖ್ಯಾ ಗಣತಿಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಮಾನದಂಡಗಳ ಪ್ರಕಾರ ಎಣಿಕೆ ಮಾಡುವ ವೀಡಿಯೊ ತುಣುಕನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2011 ರಲ್ಲಿ ಜನಸಂಖ್ಯಾ ಗಣತಿಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಮಾನದಂಡಗಳ ಪ್ರಕಾರ ಎಣಿಕೆ ಮಾಡುವ ವೀಡಿಯೊ ತುಣುಕನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.

"ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2011 ರಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ರೂಪಿಸಲು ಬಳಸಲ್ಪಟ್ಟಾಗ ಜನಸಂಖ್ಯಾ ಗಣತಿಯನ್ನು ಲೆಕ್ಕಹಾಕುವಂತೆ ಸಲಹೆ ನೀಡಿದ್ದರು” ಎಂದು ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಲ್ವಿಯಾ ವಿಡಿಯೋ ತುಣುಕನ್ನು ಒಳಗೊಂಡ ಟ್ವೀಟ್ ಮಾಡಿದ್ದಾರೆ.

ಈ ಅದೇ ಕಾಂಗ್ರೆಸ್ ಈ ವಿಷಯವನ್ನು ದೇಶದಲ್ಲಿ ದಂಗೆ ಎಬ್ಬಿಸಲು, ಸಾರ್ವಜನಿಕ ಆಸ್ತಿಯನ್ನು ಹಾಳುಗೆಡವಿ, ಅರಾಜಕತೆ ಸೃಷ್ಟಿಸಲು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕೂಡ ಕಾರ್ಯಕ್ರಮದ ಅಡಿಯಲ್ಲಿ ಜನಗಣತಿಗೆ ಒಳಪಡುತ್ತಿರುವ ತುಣುಕುಗಳನ್ನು ಈ ವಿಡಿಯೋ ಒಳಗೊಂಡಿದೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್‌ಪಿಆರ್) ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯೊಂದಿಗೆ ಜೋಡಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಮತ್ತು ಅದು ಸಂವಿಧಾನದ ಜಾತ್ಯತೀತ ರುಜುವಾತುಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಎನ್‌ಪಿಆರ್ ಎನ್‌ಆರ್‌ಸಿಯ ಮೊದಲ ಹೆಜ್ಜೆ ಎಂದು ಕೇಂದ್ರ ಗೃಹ ಸಚಿವಾಲಯ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್ ಸ್ಟಷ್ಟನೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ವಿವಿಧ ನಗರಗಳಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಗಲಭೆಕೋರರಿಗೆ ಬೆಂಬಲ ನೀಡಿದವರ ವಿರುದ್ಧ ಮಾಲ್ವಿಯಾ ವಾಗ್ದಾಳಿ ನಡೆಸಿದ್ದು, " ಇದು ಕೇವಲ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರಕ್ರಿಯೆಯಲ್ಲ ಬದಲಿಗೆ, ಅವ್ಯವಸ್ಥೆಯನ್ನು ಸೃಷ್ಟಿಸುವ ಯೋಜಿತ ಪಿತೂರಿ ಎಂಬುದು ಮಂಗಳೂರಿನಿಂದ ಅಲಿಗರ್ ಮುಸ್ಲಿಂ ವಿಶ್ವವಿದ್ಯಾಲಯದವರೆಗಿನ ಪ್ರತಿಭಟನಾ ವಿಡಿಯೋಗಳಲ್ಲಿ ಸ್ಪಷ್ಟವಾಗುತ್ತದೆ. ಸಾರ್ವಜನಿಕ ಆಸ್ತಿಗಳನ್ನು ನಾಶಪಡಿಸಲು ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com