ಪೌರತ್ವ ತಿದ್ದುಪಡಿ ಕಾಯ್ದೆಗೆ ಸದ್ಗುರು ಜಗ್ಗಿ ವಾಸುದೇವ್ ಬೆಂಬಲ: ಪ್ರಧಾನಿ ಪ್ರಶಂಸೆ

ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವ ನಡುವೆಯೇ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿರುವ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಪ್ರಧಾನಿ ನರೇಂದ್ರಮೋದಿ ಪ್ರಶಂಸಿಸಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ:  ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವ ನಡುವೆಯೇ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿರುವ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಪ್ರಧಾನಿ ನರೇಂದ್ರಮೋದಿ ಪ್ರಶಂಸಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ ಅಗತ್ಯತೆಯನ್ನು ವಿವರಿಸಿ, ತಡವಾದರೂ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದು ಸ್ವಾಗತಾರ್ಹ ಎಂದು ಆದ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಹೇಳಿರುವ ವಿಡಿಯೋವನ್ನು ಪ್ರಧಾನಿ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ.

‘ಸದ್ಗುರು ಅವರು ಕಾಯ್ದೆಗೆ ಸಂಬಂಧಿಸಿದ ಎಲ್ಲ ಆಯಾಮಗಳನ್ನು ವಿವರಿಸಿದ್ದಾರೆ. ನಮ್ಮ ಸೋದರತ್ವವನ್ನು ಜಾಣ್ಮೆಯಿಂದ ಪ್ರಸ್ತಾಪಿಸಿದ್ದಾರೆ. 

ಪಟ್ಟಭದ್ರ ಹಿತಾಸಕ್ತಿಗಳು ಹರಡುತ್ತಿರುವ ತಪ್ಪು ಮಾಹಿತಿಗೆ ಕಿವಿಗೊಡಬಾರದು ಎಂದು ಕರೆ ನೀಡಿದ್ದಾರೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com