ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ

ಲಖನೌ: ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ಸಂದರ್ಭ ಭದ್ರತೆಯ ಉಲ್ಲಂಘನೆಯಾಗಿಲ್ಲ- ಸಿಆರ್ ಪಿಎಫ್

ಉತ್ತರ ಪ್ರದೇಶ ಪೊಲೀಸರಿಂದ ಭದ್ರತೆಯ ಉಲ್ಲಂಘನೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪದ ಬೆನ್ನಲ್ಲೇ, ಅವರು ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗೆ ಮಾತ್ರ ಭೇಟಿ ನೀಡಿದ್ದ ಕಾರಣ ಯಾವುದೇ ಭದ್ರತೆಯ ಉಲ್ಲಂಘನೆಯಾಗಿಲ್ಲ ಎಂದು ಸಿಆರ್ ಪಿಎಫ್ ಪೊಲೀಸರು ತಿಳಿಸಿದ್ದಾರೆ.

ಲಖನೌ: ಉತ್ತರ ಪ್ರದೇಶ ಪೊಲೀಸರಿಂದ ಭದ್ರತೆಯ ಉಲ್ಲಂಘನೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪದ ಬೆನ್ನಲ್ಲೇ, ಅವರು ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗೆ ಮಾತ್ರ ಭೇಟಿ ನೀಡಿದ್ದ ಕಾರಣ ಯಾವುದೇ ಭದ್ರತೆಯ ಉಲ್ಲಂಘನೆಯಾಗಿಲ್ಲ ಎಂದು ಸಿಆರ್ ಪಿಎಫ್ ಪೊಲೀಸರು ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಡಿಸೆಂಬರ್ 27 , 28 ರಂದು ಲಖನೌ ಭೇಟಿ ಬಗ್ಗೆ ಸಂಬಂಧಿತ ಆಡಳಿತ ಸಂಸ್ಥೆಗಳ ಸಂವಹನದಂತೆ ಝಡ್ ಫ್ಲಸ್ ಭದ್ರತೆ ನೀಡಲಾಗಿದೆ. ಆದರೆ, ಡಿಸೆಂಬರ್ 28 ರಂದು ಅವರು ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಎಎಸ್ ಎಲ್  ಭದ್ರತಾ ನಿರ್ವಹಣೆ ಮಾಡಿತ್ತು ಎಂದು ಸಿಆರ್ ಪಿಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

ಡಿಸೆಂಬರ್ 28 ರಂದು ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿದ್ದ ಕಾರ್ಯಕ್ರಮದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಆ ಕಾರ್ಯಕ್ರಮದ ಬಗ್ಗೆ ನಮಗೆ ಮಾಹಿತಿ ನೀಡಿರಲಿಲ್ಲ. ಅಧಿಕಾರಿಗಳಿಂದ ಯಾವುದೇ ಭದ್ರತೆಯ ಉಲ್ಲಂಘನೆಯಾಗಿಲ್ಲ ಎಂದು ಸಿಆರ್ ಪಿಎಫ್ ತಿಳಿಸಿದೆ.
 

Related Stories

No stories found.

Advertisement

X
Kannada Prabha
www.kannadaprabha.com