ಜಮ್ಮು-ಕಾಶ್ಮೀರ ಪುನರ್ವಿಂಗಡಣೆ: ಶಾಲೆಗಳ ಪಠ್ಯಕ್ರಮ ಪರಿಷ್ಕರಣೆ 

ಜಮ್ಮು-ಕಾಶ್ಮೀರವನ್ನು ಪುನರ್ವಿಂಗಡಣೆ ಮಾಡಿದ ನಂತರ ಶಾಲೆಗಳ ಇತಿಹಾಸ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡುವಂತೆ ಎನ್ ಸಿಇಆರ್ ಟಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆದೇಶ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಜಮ್ಮು-ಕಾಶ್ಮೀರವನ್ನು ಪುನರ್ವಿಂಗಡಣೆ ಮಾಡಿದ ನಂತರ ಶಾಲೆಗಳ ಇತಿಹಾಸ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡುವಂತೆ ಎನ್ ಸಿಇಆರ್ ಟಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆದೇಶ ನೀಡಿದೆ.


ಎನ್ ಸಿಇಆರ್ ಟಿ ಮತ್ತು ಜಮ್ಮು-ಕಾಶ್ಮೀರ ಶಾಲಾ ಶಿಕ್ಷಣ ಮಂಡಳಿ ಪರಿಷ್ಕರಣೆ ಪಠ್ಯದಲ್ಲಿ ಸಮಾಜ ವಿಜ್ಞಾನ ವಿಷಯಗಳು, ಇತಿಹಾಸ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಪ್ರಸ್ತುತ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯ ಪಠ್ಯಕ್ರಮವನ್ನು ಅನುಸರಿಸಲಾಗುತ್ತಿದ್ದು ಅಲ್ಲಿ ಪ್ರತ್ಯೇಕ ರಾಜ್ಯ ಪಠ್ಯಕ್ರಮವಿಲ್ಲ.


ಇದೀಗ ಜಮ್ಮು-ಕಾಶ್ಮೀರ ಮತ್ತು ಲಡಾಕ್ ಕೇಂದ್ರಾಡಳಿತ ಪ್ರದೇಶಗಳಾಗಿರುವುದರಿಂದ ಪಠ್ಯಕ್ರಮದಲ್ಲಿ ಬದಲಾವಣೆ ಅನಿವಾರ್ಯವಾಗಿದ್ದು ಈ ನಿಟ್ಚಿನಲ್ಲಿ ಕೆಲಸ ಆರಂಭವಾಗಿದೆ ಎಂದು ಎನ್ ಸಿಇಆರ್ ಟಿ ಅಧಿಕಾರಿಗಳು ತಿಳಿಸಿದ್ದಾರೆ.


ಎನ್ ಸಿಇಆರ್ ಟಿ ನೇರವಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಪಠ್ಯಪುಸ್ತಕಗಳು ಸಂಪೂರ್ಣ ಕೇಸರೀಕರಣವಾಗಬಹುದು ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com