ನೌಕಾನೆಲೆಯಲ್ಲಿ ಸ್ಮಾರ್ಟ್ ಫೋನ್, ಇಂಟರ್ನೆಟ್ ಬ್ಯಾನ್ ಮಾಡಿದ ಭಾರತೀಯ ನೌಕಾಪಡೆ

ಕೆಲ ದಿನಗಳ ಹಿಂದಷ್ಟೇ ಭಾರತೀಯ ನೌಕಾಪಡೆ ಸಿಬ್ಬಂದಿಯಿಂದ ಮಹತ್ವದ ಮಾಹಿತಿಗಳು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಸೋರಿಕೆಯಾಗಿದ್ದು, ಇದರ ಬೆನ್ನಲ್ಲೇ ಭಾರತೀಯ ನೌಕಾಪಡೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಭಾರತೀಯ ನೌಕಾಪಡೆ ಸಿಬ್ಬಂದಿಯಿಂದ ಮಹತ್ವದ ಮಾಹಿತಿಗಳು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಸೋರಿಕೆಯಾಗಿದ್ದು, ಇದರ ಬೆನ್ನಲ್ಲೇ ಭಾರತೀಯ ನೌಕಾಪಡೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡದೆ. 

ನೌಕಾನೆಲೆಯಲ್ಲಿ ಸ್ಮಾರ್ಟ್'ಫೋನ್ ಬಳಕೆ, ಫೇಸ್ಬುಕ್ ಬಳಕೆ ಹಾಗೂ ಇಂಟರ್ನೆಟ್ ಬಳಕೆಗೆ ಭಾರತೀಯ ನೌಕಾಪಡೆ ನಿಷೇಧ ಹೇರಿದೆ. 

ಶತ್ರುರಾಷ್ಟ್ರ ಪಾಕಿಸ್ತಾನದ ಹನಿಟ್ರ್ಯಾಪ್ ಬಲೆಗೆ ಸಿಲುಕಿ ಭಾರತದ ಭದ್ರತೆಗೆ ಸಂಬಂಧಿಸಿದ ಬಹುಮುಖ್ಯ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದ ಆರೋಪದ ಮೇಲೆಗೆ ಕರ್ನಾಟಕದ ಕಾರವಾರದ ಕದಂಬ ನೌಕಾನೆಲೆಯ ಿಬ್ಬರು ಸೇರಿದಂತೆ ಭಾರತೀಯ ನೌಕಾಪಡೆಯ ಒಟ್ಟು 7 ಸಿಬ್ಬಂದಿಯನ್ನು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಲಾಗಿತ್ತು. 

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಇದೀಗ ನೌಕಾಪಡೆ ಸಿಬ್ಬಂದಿಗೆ ಸ್ಮಾರ್ಟ್ ಫೋನ್ ಹಾಗೂ ಫೇಸ್ ಬುಕ್ ಬಳಕೆ ನಿರ್ಬಂಧಿಸಲಾಗಿದೆ. ನೌಕಾ ಸಿಬ್ಬದಿ ಸಾಮಾಜಿಕ ಮಾಧ್ಯಮಗಲು ಹಾಗೂ ಸ್ಮಾರ್ಟ್ ಫೋನ್ ಬಳಸುವುದು ಸಾಮಾನ್ಯವಾಗಿತ್ತು. ಆದರೆ, ಇನ್ನು ಮುಂದಿನ ದಿನಗಳಲ್ಲಿ ನೌಕಾಪಟೆ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com