ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ತಕ್ಷಣವೇ ಪೂರ್ಣ ಪ್ರಮಾಣದ ಸಿಬಿಐ ನಿರ್ದೇಶಕರನ್ನು ನೇಮಕ ಮಾಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ತಕ್ಷಣವೇ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ಪೂರ್ಣ ಪ್ರಮಾಣದ ನಿರ್ದೇಶಕರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ....
ನವದೆಹಲಿ: ತಕ್ಷಣವೇ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ಪೂರ್ಣ ಪ್ರಮಾಣದ ನಿರ್ದೇಶಕರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ.
ಸಿಬಿಐ ನಿರ್ದೇಶಕರ ಹುದ್ದೆ ಅತ್ಯಂತ ಸೂಕ್ಷ್ಮ ಮತ್ತು ಮಹತ್ವದ್ದಾಗಿದ್ದು, ತನಿಖಾ ಸಂಸ್ಥೆಗೆ
ದೀರ್ಘಕಾಲ ಮಧ್ಯಂತರ ಅಥವಾ ಹಂಗಾಮಿ ನಿರ್ದೇಶಕರನ್ನು ಮುಂದುವರೆಸುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಅರುಣ್‍ಮಿಶ್ರ ಮತ್ತು ನವೀನ್ ಸಿನ್ಹಾ ಅವರನ್ನು ಒಳಗೊಂಡ ಸುಪ್ರೀಂ ಪೀಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಇದುವರೆಗೂ ಸಿಬಿಐ ನಿರ್ದೇಶಕರನ್ನು ನೇಮಕ ಮಾಡದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಹಂಗಾಮಿ ವ್ಯವಹಾರ ಬೇಡ. ತಕ್ಷಣವೇ ಸಿಬಿಐ ನಿರ್ದೇಶಕರನ್ನು ನೇಮಕ ಮಾಡಿ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿಗೆ ಸೂಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿ ಈ ನಿಟ್ಟಿನಲ್ಲಿ ಸಭೆಗಳನ್ನು ನಡೆಸಿ ಶೀಘ್ರದಲ್ಲೇ ಸಿಬಿಐಗೆ ಪೂರ್ಣ ಪ್ರಮಾಣದ ಮುಖ್ಯಸ್ಥರನ್ನು ನೇಮಕ ಮಾಡಲಿದೆ ಎಂದು ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್‍ಗೆ ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com