ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು

ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ, ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಂಡದಲ್ಲಿ ಶುಕ್ರವಾರ ನಡೆದಿದೆ.
Published on
ಬಂಡ: ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ, ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಂಡದಲ್ಲಿ ಶುಕ್ರವಾರ ನಡೆದಿದೆ.
ನಿನ್ನೆ ಸಂಜೆ ಬಿಂಸಂದ ಪ್ರದೇಶದ ನಫಿಸ್ ಖಾನ್ ಅವರ ನಿವಾಸದಲ್ಲಿ ನಡೆಸಲಾಗುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶಾರುಖ್(19), ಸಲ್ಮಾನ್(16), ನಫಿಸ್(35) ಹಾಗೂ ರಾಮಹರ್ದನ್(15) ಎಂದು ಗುರುತಿಸಲಾಗಿದೆ.
ಸ್ಫೋಟದ ತೀವ್ರತೆಗೆ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾಲ್ ಭಾರತ್ ಕುಮಾರ್ ಪಾಲ್ ಅವರು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com