ಬಜೆಟ್ ವೇಳೆ ಸಂಸದರಿಂದ 'ಮೋದಿ ಮೋದಿ' ಘೋಷಣೆ: ಕಕ್ಕಾಬಿಕ್ಕಿಯಾದ ವಿಪಕ್ಷೀಯರು, ವಿಡಿಯೋ ವೈರಲ್!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕೊನೆಯ ಬಜೆಟ್ ಅನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಬಜೆಟ್ ಮಂಡನೆ ಮಾಡಿದ್ದು ಈ ವೇಳೆ ಸಂಸದರು 1 ನಿಮಿಷಗಳ ಕಾಲ...
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕೊನೆಯ ಬಜೆಟ್ ಅನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಬಜೆಟ್ ಮಂಡನೆ ಮಾಡಿದ್ದು ಈ ವೇಳೆ ಸಂಸದರು 1 ನಿಮಿಷಗಳ ಕಾಲ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. 
ಪಿಯೂಷ್ ಗೋಯಲ್ ಅವರು ಮಧ್ಯಮವರ್ಗದ ಜನರಿಗೆ ದೊಡ್ಡ ತೆರಿಗೆ ರಿಲೀಫ್ ನೀಡಿದ್ದು, 5 ಲಕ್ಷವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದು ಈ ವೇಳೆ ಎನ್ಡಿಎ ಸಂಸದರು ಮೇಜನ್ನು ತಟ್ಟುತ್ತಾ ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಈ ವೇಳೆ ವಿಪಕ್ಷೀಯಕರು ಕಕ್ಕಾಬಿಕ್ಕಿಯಾದರು. 
ಸಂಸದರು ಮೋದಿ ಮೋದಿ ಎಂದು ಘೋಷಣೆ ಕೂಗಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com