ಅಂಬಾನಿಗೆ 30 ಸಾವಿರ ಕೋಟಿ ರೂ.ಹಂಚುವ ಪ್ರಧಾನಿ ರೈತರಿಗೆ ಕೇವಲ 17 ರೂ. ಕೊಡ್ತಾರೆ- ರಾಹುಲ್ ಗಾಂಧಿ

ಬಿಹಾರದ ಗಾಂಧಿ ಮೈದಾನದಲ್ಲಿ ಇಂದು ನಡೆದ ಜನ ಆಕಾಂಕ್ಷ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ಪಾಟ್ನಾ: ಗಾಂಧಿ ಮೈದಾನದಲ್ಲಿ ಇಂದು ನಡೆದ ಜನ ಆಕಾಂಕ್ಷ  ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ,  ಉದ್ಯಮಿಗಳ ಸಾಲ ಮನ್ನಾ ಮಾಡುವ ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಏಕೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೂರು ದಶಕಗಳ ಬಳಿಕ ಇದೇ ಮೊದಲ ಬಾರಿಗೆ  ಗಾಂಧಿ ಮೈದಾನದಲ್ಲಿ ನಡೆದ  ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ  ಗುಡುಗಿದ ರಾಹುಲ್ ಗಾಂಧಿ, ಅನಿಲ್ ಅಂಬಾನಿಗೆ 30  ಸಾವಿರ ಕೋಟಿ ರೂ ಹಂಚಿಕೆ ಮಾಡುವ ಪ್ರಧಾನಿ ರೈತರಿಗೆ ದಿನವೊಂದಕ್ಕೆ ಕೇವಲ 17 ರೂ. ನೀಡುತ್ತಾರೆ ಎಂದು ಮಧ್ಯಂತರ ಬಜೆಟ್ ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಉದ್ಯೋಗದ ಭರವಸೆ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಪ್ರತಿವರ್ಷ 2 ಕೋಟಿ ಉದ್ಯೋಗ ಒದಗಿಸುವುದಾಗಿ ಮೋದಿ ಹೇಳಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಮಧ್ಯಪ್ರದೇಶ, ಛತ್ತೀಸ್ ಗಡ ಹಾಗೂ ರಾಜಸ್ತಾನಗಳಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ 10 ದಿನಗಳಲ್ಲಿಯೇ  ನುಡಿದಂತೆ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com