ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿದ ಬಿಹಾರ ಸರ್ಕಾರ

ಬಿಹಾರದಲ್ಲಿ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ಕೂಡ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ ನೀಡುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿದ ಬಿಹಾರ ಸರ್ಕಾರ
ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿದ ಬಿಹಾರ ಸರ್ಕಾರ
ಪಾಟ್ನಾ: ಬಿಹಾರದಲ್ಲಿ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ಕೂಡ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ ನೀಡುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ದುರಂತ ಸಂಬಂಧ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್ ಅವರು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಅಂತೆಯೇ ಮೃತರ ಕುಟುಂಬಸ್ಥರಿಗೆ ತಮ್ಮ ಸರ್ಕಾರದ ವತಿಯಿಂದ ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ನೀಡುವುದಾಗಿ ಹೇಳಿದ್ದಾರೆ.
ಅಂತೆಯೇ ದುರಂತದಲ್ಲಿ ಗಾಯಾಳುಗಳು ಮತ್ತು ಅವರ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಯೂ ನಿತೀಶ್ ಕುಮಾರ್ ಹೇಳಿದರು.
ಇನ್ನು ದುರಂತದ ಹಿನ್ನಲೆಯಲ್ಲಿ ಬಿಹಾರದ ಸಹದಾಯ್ ಬುಜರ್ಗ್ ಮಾರ್ಗದಲ್ಲಿನ ಎಲ್ಲ ರೈಲುಗಳ ಸಂಚಾರ ನಿಷೇಧಿಸಲಾಗಿದ್ದು, ಬೇರೆ ಮಾರ್ಗಗಳಿಗೆ ಬದಲಿಸಲಾಗಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com