ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಯೋಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ನಿರಾಕರಣೆ- ಬಿಜೆಪಿ

ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅಲ್ಲಿನ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಇಂದು ಆರೋಪಿಸಿದೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಬಾಲೂರ್ ಘಾಟ್: ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು  ಅಲ್ಲಿನ ಸರ್ಕಾರ ಅನುಮತಿ ನೀಡಿಲ್ಲ ಎಂದು ಬಿಜೆಪಿ ಇಂದು ಆರೋಪಿಸಿದೆ.

ದಕ್ಷಿಣ ದಿನಾಜ್ ಪುರ ಜಿಲ್ಲೆಯ ಬಾಲೂರ್ ಘಾಟ್  ಹಾಗೂ ಉತ್ತರ ದಿನಾಜ್ ಪುರ ಜಿಲ್ಲೆಯ ರಾಯ್ ಗಂಜ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ  ಯೋಗಿ ಆದಿತ್ಯನಾಥ್  ಮಾತನಾಡುವ ಕಾರ್ಯಕ್ರಮವಿತ್ತು.

ಆದರೆ,ಹೆಲಿಕಾಪ್ಟರ್  ಲ್ಯಾಂಡ್ ಆಗಲು ಅನುಮತಿ ನೀಡದ ಹಿನ್ನೆಲೆಯಲ್ಲಿ  ಯೋಗಿ ಆದಿತ್ಯನಾಥ್ ಟೆಲಿಪೋನ್ ಮೂಲಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರ ಆಡಳಿತವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ಮತ್ತೊಂದೆಡೆ  ಪಶ್ಚಿಮ ಬಂಗಾಳ ಸರ್ಕಾರದ ಧೋರಣೆ ಖಂಡಿಸಿ ಬಾಲೂರ್ ಘಾಟ್  ಬಳಿಯ ಜಿಲ್ಲಾಧಿಕಾರಿ  ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮುಂಚಿತವಾಗಿಯೇ ಅನುಮತಿ ಕೇಳಲಾಗಿದೆಯಾದರೂ ಈ ವಿಚಾರವಾಗಿ ಪಶ್ಚಿಮ ಬಂಗಾಳ ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
ಇದು ಪಶ್ಚಿಮ ಬಂಗಾಳದಲ್ಲಿನ  ಆಘೋಷಿತ ತುರ್ತುಪರಿಸ್ಥಿತಿಗೆ  ಮತ್ತೊಂದು ಉದಾಹರಣೆಯಾಗಿದೆ ಎಂದು  ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಆರೋಪಿಸಿದ್ದು, ಜಿಲ್ಲಾಧಿಕಾರಿಯನ್ನು ಕೂಡಲೇ ಅಮಾನತುಪಡಿಸಬೇಕೆಂದು ಆಗ್ರಹಿಸಿದ್ದಾರೆ.
ನಂತರ ಪಶ್ಚಿಮ ಬಂಗಾಳ ಬಿಜೆಪಿ ಘಟಕ  ಮಾಲ್ಡಾದಲ್ಲಿನ ಗೋಲ್ಡನ್ ಪಾರ್ಕ್ ಹೋಟೆಲ್ ಹಾಗೂ ಬಿಎಸ್ ಎಫ್ ಯೋದರು ಬಳಸುತ್ತಿದ್ದ ಹೆಲಿಪ್ಯಾಡ್ ನಲ್ಲಿ  ಶಾ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ಪಡೆದುಕೊಂಡಿತ್ತು. ನಂತರ ಶಾ ದೂಲೈನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com