ಮೋದಿ ವರ್ಸಸ್ ದೀದಿ: ಸಿಬಿಐ ಎದುರು ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಗೆ 'ಸುಪ್ರೀಂ' ನಿರ್ದೇಶನ

ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ರಾಜೀವ್ ಕುಮಾರ್
ರಾಜೀವ್ ಕುಮಾರ್

ಕೊಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಸಂವಿಧಾನ ಉಳಿಸಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದ್ದು, ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ  ಪೊಲೀಸ್ ಕಮೀಷನರ್  ರಾಜೀವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ಸಿಬಿಐಗೆ ಸಹಕಾರ ನೀಡುವಂತೆಯೂ ಸೂಚಿಸಿದೆ.

ಈ ಮಧ್ಯೆ  ಮಧ್ಯಂತರ ಪರಿಹಾರ ಕೋರಿ ರಾಜೀವ್ ಕುಮಾರ್  ಕಲ್ಕತ್ತಾ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಲಾಗಿದೆ.

ಶಾರದಾ ಹಾಗೂ ರೋಸ್ ವ್ಯಾಲಿ ಚಿಟ್ ಫಂಡ್  ಪ್ರಕರಣಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಇವುಗಳ ವಿದ್ಯುನ್ಮಾನ ಸಾಕ್ಷ್ಯಗಳನ್ನು ನಾಶಪಡಿಸಲು  ಕುಮಾರ್  ಪ್ರಯತ್ನಿಸುತ್ತಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಶಿಲ್ಲಾಂಗ್ ನಲ್ಲಿ ಸಿಬಿಐ ಮುಂದೆ ರಾಜೀವ್ ಕುಮಾರ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com