ಬ್ಯಾಂಕ್ ಗಳಿಂದ ವಿಜಯ್ ಮಲ್ಯ ಆಸ್ತಿ ಸ್ವಾಧೀನಕ್ಕೆ ನಮ್ಮ ಆಕ್ಷೇಪ ಇಲ್ಲ: ಇಡಿ

ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿಗಳನ್ನು ಸಾಲ ನೀಡಿದ ಬ್ಯಾಂಕ್ ...
ವಿಜಯ್ ಮಲ್ಯ
ವಿಜಯ್ ಮಲ್ಯ
ಮುಂಬೈ: ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿಗಳನ್ನು ಸಾಲ ನೀಡಿದ ಬ್ಯಾಂಕ್ ಗಳು ಸ್ವಾಧೀನ ಪಡಿಸಿಕೊಳ್ಳಲು ನಮ್ಮ ಆಕ್ಷೇಪ ಇಲ್ಲ. ಆದರೆ ಅದರ ವಿವರ ನೀಡಬೇಕು ಎಂದು ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ವಿಶೇಷ ಕೋರ್ಟ್ ಗೆ ತಿಳಿಸಿದೆ.
ಮಲ್ಯ ಆಸ್ತಿಗಳ ಸ್ವಾಧೀನಕ್ಕೆ ಅನುಮತಿ ಕೋರಿ ಬ್ಯಾಂಕ್ ಗಳ ಕೂಟ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಇಡಿ, ಆಸ್ತಿ ಸ್ವಾಧೀನಕ್ಕೆ ನಮ್ಮ ಆಕ್ಷೇಪ ಇಲ್ಲ. ಆದರೆ ಬ್ಯಾಂಕ್ ಗಳು ಆಸ್ತಿಗಳ ಕುರಿತು ಲಿಖಿತ ವಿವರ ನೀಡಬೇಕು ಎಂದು ಹೇಳಿದೆ.
ವಿಜಯ್ ಮಲ್ಯ ಅವರು ಬ್ಯಾಂಕ್ ಗಳಿಂದ ಒಟ್ಟು 9 ಸಾವಿರ ಕೋಟಿ ರುಪಾಯಿ ಬಾಕಿ ಉಳಿಸಿಕೊಂಡಿದ್ದಾರೆ.
ಸದ್ಯ ಬ್ರಿಟನ್ ನಲ್ಲಿರುವ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಗೃಹ ಕಾರ್ಯದರ್ಶಿ ಸಾಜಿದ್ ಸಾವಿದ್ ಅವರು ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com