2ನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ: ಇಡಿ ಅಧಿಕಾರಿಗಳಿಂದ ಹೆಚ್ಚಿನ ತನಿಖೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ
Updated on: 
ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇಬ್ಬರು ಉಪ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರನ್ನೊಳಗೊಂಡ ತಂಡದಿಂದ ರಾಬರ್ಟ್ ವಾದ್ರಾ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬುದು ಇಡಿ ಮೂಲಗಳಿಂದ ತಿಳಿದುಬಂದಿದೆ.
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ಆಗಿರುವ ರಾಬರ್ಟ್ ವಾದ್ರಾ ಬುಧವಾರ ಐದೂವರೆ ತಾಸುಗಳ ಕಾಲ  ವಿಚಾರಣೆ ಎದುರಿಸಿದ್ದರು.
ಮತ್ತೆ ಇಂದು ಬೆಳಗ್ಗೆ 11-25ಕ್ಕೆ  ಕೇಂದ್ರ ದೆಹಲಿಯ ಜಾಜ್ ನಗರ್ ಹೌಸ್ ನಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ರಾಬರ್ಟ್ ವಾದ್ರಾ ಅವರನ್ನು ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com