ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ ಅರುಣ್ ಜೇಟ್ಲಿ

ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರು ಶನಿವಾರ ಭಾರತಕ್ಕೆ ಮರಳಿದ್ದಾರೆ.
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Updated on
ನವದೆಹಲಿ: ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರು ಶನಿವಾರ ಭಾರತಕ್ಕೆ ಮರಳಿದ್ದಾರೆ.
ಮನೆಗೆ ವಾಪಸ್ಸಾಗಿರುವುದಕ್ಕೆ ಸಂತೋಷವಾಗಿದೆ ಎಂದು ತಾಯ್ನಾಡಿಗೆ ಬಂದ ತಕ್ಷಣ ಜೇಟ್ಲಿ ಟ್ವಿಟ್ ಮಾಡಿದ್ದಾರೆ. 
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 66 ವರ್ಷದ ಅರುಣ್ ಜೇಟ್ಲಿ ಅವರು ಕಳೆದ ವರ್ಷ ಏಪ್ರಿಲ್ ನಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜನವರಿ 15ರಂದು ಅಮೆರಿಕಕ್ಕೆ ತೆರಳಿದ್ದರು.
ಅರುಣ್​ ಜೇಟ್ಲಿ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಕಾರಣದಿಂದ ಕಳೆದ ವಾರ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ಮಾಡಲು ಸಾಧ್ಯವಾಗಿರಲಿಲ್ಲ. ಅವರ ಬದಲಿಗೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್​ ಅವರು ಬಜೆಟ್ ಮಂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com