ವಿಚಾರಣೆ ವೇಳೆ ವಾದ್ರಾ ಅವರು ನೀಡಿದ ಹೇಳಿಕೆಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರಡಿ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮೂಲಗಳು ತಿಳಿಸಿವೆ. ಇನ್ನೊಂದು ಅಕ್ರಮ ಹಣ ವರ್ಗಾವಣೆ ಕೇಸಿನ ವಿಚಾರಣೆಗೆ ಸಂಬಂಧಪಟ್ಟಂತೆ ಇದೇ 12ರಂದು ಜೈಪುರದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ವಾದ್ರಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.