ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ, ಹಿರಿಯ ಅಧಿಕಾರಿಗಳು ನಕಾರ

ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟ್ವಿಟ್ಟರ್ ಬಲ ಪಂಥೀಯರ ಖಾತೆಗಳ ಬಗ್ಗೆ ನಕಾರಾತ್ಮಕ ಧೋರಣೆ ಹೊಂದಿದೆ ಎಂಬ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟ್ವಿಟ್ಟರ್  ಬಲ ಪಂಥೀಯರ ಖಾತೆಗಳ ಬಗ್ಗೆ ನಕಾರಾತ್ಮಕ ಧೋರಣೆ ಹೊಂದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ ಹಾಗೂ ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಶನಿವಾರ ಮೂಲಗಳು ತಿಳಿಸಿವೆ.
ಫೆಬ್ರವರಿ 1ರಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ನೇತೃತ್ವದ ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸಮಿತಿ,  ಟ್ವಿಟ್ಟರ್ ಗೆ ಸಮನ್ಸ್ ಜಾರಿ ಮಾಡಿ, ಫೆಬ್ರವರಿ 11ಕ್ಕೆ ನಿಗದಿಯಾಗಿರುವ ಸಭೆಯಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗಲು 10 ದಿನ ಕಾಲವಕಾಶ ನೀಡಿದರೂ 'ಕಡಿಮೆ ಅವಧಿ'ಯ ಕಾರಣ ನೀಡಿ ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ ಸಂಸದೀಯ ಸಮಿತಿ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ್ದ ಟ್ವಿಟ್ಟರ್, ಬಲಪಂಥೀಯ ವಿರೋಧಿ ಧೋರಣೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ. ಮಾತುಕತೆ ಮುಗಿದ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಟ್ವಿಟ್ಟರ್ ಇಂಡಿಯಾ ವಕ್ತಾರರು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com