ಪಶ್ಚಿಮ ಬಂಗಾಳ: ಟಿಎಂಸಿ ಶಾಸಕ ಹತ್ಯೆ, ಮುಕುಲ್ ರಾಯ್ ವಿರುದ್ಧ ಎಫ್ ಐಆರ್ ದಾಖಲು

ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜೀತ್ ಬಿಸ್ವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ಪೂರ್ವ ಬಂಗಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಮುಕುಲ್ ರಾಯ್
ಮುಕುಲ್ ರಾಯ್
Updated on: 

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜೀತ್ ಬಿಸ್ವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ಪೂರ್ವ ಬಂಗಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ತೃಣ ಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಹಾಗೂ ಮನ್ ಮೋಹನ್ ಸಿಂಗ್  ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಮುಕುಲ್ ರಾಯ್  ಹಾಗೂ ಮಮತಾ ಬ್ಯಾನರ್ಜಿ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಸತ್ಯಜೀತ್ ಬಿಸ್ವಾಸ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಬಿಜೆಪಿಯೇ ಈ ಹತ್ಯೆ ಮಾಡಿಸಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಮಮತಾ ಬ್ಯಾನರ್ಜಿ ಅವರೇ ಸಂಪೂರ್ಣ ಜವಾಬ್ದಾರರು ಎಂದು ಬಿಜೆಪಿ ಹೇಳಿಕೆ ನೀಡಿತ್ತು.

ಈ ಪ್ರಕರಣದಲ್ಲಿ ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದ್ದ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಹಂಸಾಕಾಲಿ ಠಾಣೆಯ  ಉಸ್ತುವಾರಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಆರೋಪಿಯಾಗಿರುವ  ಮುಕುಲ್ ರಾಯ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಸಿಬಿಐ ಕಳೆದ ಭಾನುವಾರ ತೆರಳಿದ್ದಾಗಿನಿಂದಲೂ  ಕೇಂದ್ರ ಸರ್ಕಾರ ಹಾಗೂ ಮಮತಾ ಬ್ಯಾನರ್ಜಿ ಸರ್ಕಾರ ನಡುವೆ ಜಿದ್ದಾಜಿದಿ ಏರ್ಪಟ್ಟಿದೆ.

ಅಂದಿನಿಂದಲೂ ಭ್ರಷ್ಟಾಚಾರ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಡುವೆ ಮಾತಿನ ವಾಕ್ ಸಮರ ನಡೆಯುತ್ತಿದ್ದು, ಕಾರ್ಯಕರ್ತರ ಮೇಲೆ ದೈಹಿಕ ಹಲ್ಲೆಗಳು ಕೂಡಾ ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com