

ಪುಣೆ: ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ತೋರಿಸಲಾಗುತ್ತಿರುವುದು ಆತಂಕ ತಂದಿದೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಉನ್ನತ ನಾಯಕರ ಬಗ್ಗೆ ನೀಡಿದ ಹೇಳಿಕೆಯಿಂದ ಬಿಜೆಪಿ ನಾಯಕ ಗಡ್ಕರಿ ಸುದ್ದಿಯಾಗಿದ್ದರು.
ಮಹಾರಾಷ್ಟ್ರದ ಸೊಲಾಪುರದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡ್ಕರಿ ನನ್ನ ಸ್ನೇಹಿತ. ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಮೋದಿಗೆ ಪರ್ಯಾಯವಾಗಿ ಪ್ರಧಾನಿ ಹುದ್ದೆಗೆ ಗಡ್ಕರಿ ಅವರ ಹೆಸರನ್ನು ಮುಂದೆ ತರಲಾಗುತ್ತಿದೆ ಇದು ನನಗೆ ಆತಂಕ ಉಂಟುಮಾಡಿದೆ ಎಂದರು.
ಲೋಕಸಭೆ ಚುನಾವಣೆಗೆ ಮಹಾಮೈತ್ರಿಯ ಬಗ್ಗೆ ಮಾತನಾಡಿದ ಪವರ್, ತಮ್ಮ ಪಕ್ಷ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ನೇತೃತ್ವದ ನವನಿರ್ಮಾಣ ಸೇನೆಯ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಾಜ್ ಠಾಕ್ರೆ ಯುವಕರಿಗೆ ಬೆಂಬಲ ನೀಡುತ್ತಾರೆ ಎಂದರು ಪವರ್.