ದೆಹಲಿ: ಕರೋಲ್ ಬಾಗ್ ಹೊಟೆಲ್ ಅಗ್ನಿ ದುರಂತ, ಸಾವಿನ ಸಂಖ್ಯೆ 17ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕರೋಲ್ ಬಾಗ್ ಹೊಟೆಲ್ ಅಗ್ನಿ ದುರಂತ
ಕರೋಲ್ ಬಾಗ್ ಹೊಟೆಲ್ ಅಗ್ನಿ ದುರಂತ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ದೆಹಲಿಯ ಅರ್ಪಿತ್ ಪ್ಯಾಲೇಸ್ ಹೋಟೆಲ್​ನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.  ಕರೋಲ್ ಬಾಗ್ ನಲ್ಲಿ ಈ ಅರ್ಪಿತ್ ಪ್ಯಾಲೇಸ್ ಹೋಟೆಲ್​ ಇದ್ದು, ಇಂದು ಮುಂಜಾನೆ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಹೋಟೆಲ್​ ಆವರಿಸಿದೆ. ಅಂತೆಯೇ ಹೊಟೆಲ್ ನಲ್ಲಿದ್ದ ಸಿಬ್ಬಂದಿಗಳೂ ಸೇರಿದಂತೆ ಹಲವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ.
ಹೋಟೆಲ್ ನ ನಾಲ್ಕನೇ ಅಂತಸ್ತಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ನಂತರ ಎರಡನೇ ಅಂತಸ್ತಿನವರೆಗೂ ಬೆಂಕಿ ಹಬ್ಬಿದೆ. ಮೊದಲ ಅಂತಸ್ತು ಹಾಗೂ ನೆಲಮಹಡಿ​ ಸುರಕ್ಷಿತವಾಗಿದೆ.  ಬೆಳಗ್ಗೆ 7 ಗಂಟೆಯವರೆಗೂ ದಟ್ಟವಾದ ಹೊಗೆ ಆವರಿಸಿತ್ತು. ಬೆಂಕಿಯನ್ನು ಸಂಪೂರ್ಣವಾಗಿ ಆರಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಸದ್ಯ, ಹೋಟೆಲ್​ನಲ್ಲಿ ಶೋಧ ಕಾರ್ಯಾಚಾರಣೆ ಆರಂಭಿಸಲಾಗಿದೆ. ಹೋಟೆಲ್ ನಲ್ಲಿ ಹಲವರು ಸಿಲುಕಿರುವ ಶಂಕೆ ಇದೆ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ್​ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com