ಆಶ್ರಯ ಮನೆ ಪ್ರಕರಣ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಆದೇಶ

ಮುಜಫರ್ ಪುರ್ ಆಶ್ರಯ ಮನೆ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಮೂವರ ವಿಚಾರಣೆ ನಡೆಸಲು ಬಿಹಾರದ ನ್ಯಾಯಾಲಯವು.....
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on: 
ಪಾಟ್ನಾ:  ಮುಜಫರ್ ಪುರ್ ಆಶ್ರಯ ಮನೆ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಮೂವರ ವಿಚಾರಣೆ ನಡೆಸಲು ಬಿಹಾರದ ನ್ಯಾಯಾಲಯವು ಕೇಂದ್ರ ತನಿಖಾ ದಳಕ್ಕೆ ಆದೇಶ ನೀಡಿದೆ.
ಮುಜಫರ್ ಪುರ್ ವಿಶೇಷ ಪೋಕ್ಸೋ ನ್ಯಾಯಾಲಯವು ಆರೋಪಿ ಅಶ್ವನಿ ಎಂಬಾತ ಸಲ್ಲಿಸಿದ ಮನವಿ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಅಶ್ವಮಿ ಆಶ್ರಮದಲ್ಲಿದ್ದ ಬಾಲಕಿಯರಿಗೆ ಇಂಜೆಕ್ಷನ್ ನೀಡುತ್ತಿದ್ದ. ನಂತರ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿತ್ತು. 
ಮುಜಫರ್ ಪುರ್,ಮಾಜಿ ಡಿಎಂಧರ್ಮೇಂದ್ರ ಸಿಂಗ್, ಹಿರಿಯ ಐಎಎಸ್ ಅಧಿಕಾರಿ ಅತುಲ್ ಕುಮಾರ್ ಸಿಂಗ್,  ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತನಿಖೆ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ವಿಶೇಷ ನ್ಯಾಯಾಧೀಶ ಮನೋಜ್ ಕುಮಾರ್ ಸಿಬಿಐಗೆ ಈ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com