ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ

ಅಕ್ರಮ ಆಸ್ತಿ ಪ್ರಕರಣ: ಮಾರ್ಚ್ 2ರವರೆಗೆ ರಾಬರ್ಟ್ ವಾದ್ರಾ ಬಂಧನವಿಲ್ಲ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ .....
ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಬಂಧನದ ವಿರುದ್ಧ ರಕ್ಷಣೆಯನ್ನು ದೆಹಲಿ ಕೋರ್ಟ್ ಮಾರ್ಚ್  2ರವರೆಗೆ ವಿಸ್ತರಿಸಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋದರ ಸಂಬಂಧಿ ವಾದ್ರಾ ಅವರಿಗೆ ಈ ಮಧ್ಯಂತರ ಪರಿಹಾರವನ್ನು ಒದಗಿಸಿದ್ದಾರೆ.
ಈ ಪ್ರಕರಣದಲ್ಲಿ ವದ್ರಾ ಅವರನ್ನು ಪ್ರಶ್ನಿಸುವ ಅಗತ್ಯವಿದೆ ಎಂದು ಇಡಿ ಪರ ವಕೀಲ ನಿತೀಶ್ ರಾಣಾ  ಕೋರ್ಟ್ ಗೆ ತಿಳಿಸಿದ್ದಾರೆ. ಅಲ್ಲದೆ ವಾದ್ರಾ ವಿಚಾರಣೆಗೆ ಸಹಕರಿಸದ ಕಾರಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದೂ ಅವರು ಕೋರಿದ್ದಾರೆ. ಆದರೆ ವಾದ್ರಾ ಇಡಿ ವಾದವನ್ನು ಅಲ್ಲಗೆಳೆದಿದ್ದು "ನಾನು ಇಡಿ ಅಧಿಕಾರಿಗಳು ಕರೆ ಮಾಡಿದಾಗಲೆಲ್ಲ ವಿಚಾರಣೆಗೆ ಹಾಜರಾಗಿದ್ದೇನೆ" ಎಂದಿದ್ದಾರೆ.
ಫೆ.  2ರಂಂದು ನ್ಯಾಯಾಲಯವು ವಾದ್ರಾಗೆ ಫೆ.16ರ ತನಕ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಲ್ಲದೆ ಇಡಿ ಅಧಿಕಾರಿಗಳೊಡನೆ ಪ್ರಕರಣದ ವಿಚಾರಣೆಗೆ ಸಹಕರಿಸಬೇಕು ಎಂದೂ ಹೇಳಿದೆ.
ವಾದ್ರಾ ಅವರು ಲಂಡನ್ ನಲ್ಲಿ ಹೊಂದಿರುವ ಆಸ್ತಿ ಹಾಗೂ ಅದರ ವ್ಯವಹಾರದಲ್ಲಿ ಆಗಿದೆ ಎನ್ನಲಾಗಿರ್ಯ್ವ ಅಕ್ರಮ ಹಣ ವರ್ಗಾವಣೆ ಕುರಿತು ಈ ಪ್ರಕರಣ ದಾಖಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com