ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದು, ಪುಲ್ವಾಮದ ಪಿಂಗ್ಲಾ ಪ್ರಾಂತ್ಯದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಭೀಕರ ಚಕಮಕಿ ನಡೆಯುತ್ತಿದ್ದು, ಈ ವೇಳೆ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಅಂತೆಯೇ ಹಲವು ಸೈನಿಕರು ಗಾಯಗೊಂಡಿದ್ದು, ಗಾಯಾಳು ಸೈನಿಕರನ್ನು ಸಮೀಪದ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.