ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.3ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಹೆಚ್ಚಳ ಮಾಡಲು ಮಂಗಳವಾರ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಹೆಚ್ಚಳ ಮಾಡಲು ಮಂಗಳವಾರ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದರಿಂದ 1.1 ಕೋಟಿ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರಿ ನೌಕರರು ಸದ್ಯ ಶೇ. 9 ರಷ್ಟು ತುಟ್ಟಿ ಭತ್ಯೆ ಪಡೆಯುತ್ತಿದ್ದು, ಅದನ್ನು ಈಗ ಶೇ.12ಕ್ಕೆ ಏರಿಕೆ ಮಾಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು, ಜನವರಿ 1, 2019ರಿಂದ ಪೂರ್ವಾನ್ವಯವಾಗುಂತೆ ಇದನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com