ಬಿಜೆಪಿ ಸೋಲಿನ ಭಯದಿಂದ ಶಿವಸೇನೆ, ಎಐಎಡಿಎಂಕೆ ಜತೆ ಮೈತ್ರಿ: ಮಾಯಾವತಿ

ಕೆಲವೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಡೆಯನ್ನು ಕಟ್ಟಿಹಾಕುವುದಕ್ಕಾಗಿ ಬದ್ಧವೈರಿಗಳಾಗಿದ್ದ ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿ ಮಾಡಿಕೊಂಡ...
ಮಾಯಾವತಿ
ಮಾಯಾವತಿ
ಲಖನೌ: ಕೆಲವೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಡೆಯನ್ನು ಕಟ್ಟಿಹಾಕುವುದಕ್ಕಾಗಿ ಬದ್ಧವೈರಿಗಳಾಗಿದ್ದ ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿ ಮಾಡಿಕೊಂಡ ನಂತರ ಬಿಜೆಪಿ ಸೋಲಿನ ಭಯದಿಂದ ಶಿವಸೇನೆ ಹಾಗೂ ಎಐಎಡಿಎಂಕೆ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಹೇಳಿದ್ದಾರೆ.
ಬಿಜೆಪಿ ಮಹಾರಾಷ್ಟ್ರ ಮತ್ತು ತಮಿಳುನಾಡು ನಂತರ ಈಗ ಬಿಹಾರದಲ್ಲೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತಿರುವುದು ಅವರ ಅಸಹಾಯಕತೆಯನ್ನು ತೋರಿಸುತ್ತಿದೆ ಮತ್ತು ಪ್ರಾದೇಶಿಕ ಪಕ್ಷಗಳ ಮುಂದೆ ಮಂಡಿಯೂರಿದೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿಯಿಂದ ಬಿಜೆಪಿ ಆತಂಕಗೊಂಡಿದೆ. ಹೀಗಾಗಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.
ಬಡವರ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಬಿಜೆಪಿಗೆ ದೇಶದ ಜನ ಮತ್ತೆ ಯಾವುದೇ ಕಾರಣಕ್ಕೂ ಅಧಿಕಾರ ನೀಡುವುದಿಲ್ಲ ಎಂದು ಬಿಎಸ್ ಪಿ ನಾಯಕಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com