ಪುಣೆ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆಯನ್ನು ಖಚಿತ ಪಡಿಸಿರುವ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್, ತಮ್ಮ ಸಂಬಂಧಿಗಳಾರು ಕಣಕ್ಕಿಳಿಯುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ತಮ್ಮ ಸಂಬಂಧಿಗಳಾದ ಅಜಿತ್ ಪವಾರ್ ಅಥವಾ ಪಾರ್ಥ್ ಪವಾರ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುತ್ತಿಲ್ಲ ಎಂದು ಹೇಳಿದ್ದಾರೆ,
ನೈರುತ್ಯ ಮಹಾರಾಷ್ಟ್ರದ ಮದಾ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಎನ್ ಸಿ ಪಿ ಮುಖಂಡರು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.,
ವಂಶವಾಹಿ ರಾಜಕಾರಣ ಮುಂದುವರಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಪವಾರ್. ತಮ್ಮ ಸಂಬಂಧಿ ಅಜಿತ್ ಪವಾರ್ ಹಾಗೂ ಅವರ ಪುತ್ರ ಪಾರ್ಥ್ ಪವಾರ್ ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೇ ಬಾರಾಮತಿ ಕ್ಷೇತ್ರದ ಸಂಸದೆಯಾಗಿದ್ದಾರೆ.